Site icon PowerTV

ಕಾಂಗ್ರೆಸ್​ ಕ್ರೆಡಿಟ್​ ತೆಗೆದುಕೊಳ್ಳಲು ಹೋಗಿ ಸಂಭ್ರಮದ ಕ್ಷಣವನ್ನ ಸೂತಕವಾಗಿ ಮಾಡಿದೆ; ಆರ್​.ಅಶೋಕ್​

ಬೆಂಗಳೂರು (ಜೂ.04): ಐಪಿಎಲ್​ ಸಂಭ್ರಮಚಾರಣೆಯಲ್ಲಿದ್ದ ಬೆಂಗಳೂರಿಗೆ ಅಕ್ಷರಶಹ ಸೂತಕದ ಛಾಯೆ ಆವರಿಸಿದ್ದು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಮತ್ತು ನೂಕು ನುಗ್ಗಲಿನಲ್ಲಿ 11 ಜನ ಸಾವನ್ನಪ್ಪಿದ್ದು. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಕುರಿತು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು. ಆರ್​ ಅಶೋಕ್​ ಟ್ವಿಟ್​ ಮಾಡಿ ಸರ್ಕಾರವನ್ನ ಟೀಕಿಸಿದ್ದಾರೆ. ಇದನ್ನೂ ಓದಿ :ಸಂಭ್ರಮಚರಣೆ ವೇಳೆ ಕಾಲ್ತುಳಿತ; ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಅಭಿಮಾನಿಗಳು, ಸಂಚಾರದಲ್ಲಿ ವ್ಯತ್ಯಯ

ಆರ್​. ಅಶೋಕ್​ ಟ್ವಿಟ್​..!

ಐಪಿಎಲ್ ಪಟ್ಟ ಗೆದ್ದಿರುವ ಆರ್​ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ.

ಕನ್ನಡಿಗರ ಜನಪ್ರಿಯ ಆರ್​ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ. ಇದನ್ನೂ ಓದಿ :ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾ*ವು; ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಆಕ್ರೋಶ

ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ.

ಚಾಂಪಿಯನ್ ಆರ್ ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನ ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ. ಇದನ್ನೂ ಓದಿ :ನಿಷ್ಠೆ ಪ್ರಶಸ್ತಿ ಗೆಲ್ಲುವುದಷ್ಟೇ ಅಲ್ಲ, ಅದು ಇತಿಹಾಸ ನಿರ್ಮಿಸುತ್ತದೆ; ಆನಂದ್ ಮಹಿಂದ್ರಾ

ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು. ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದು ಆರ್​. ಅಶೋಕ್​ ಟ್ವಿಟ್​ ಮಾಡಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version