Site icon PowerTV

ಭೀಕರ ಕಾಲ್ತುಳಿತ, ಸ್ವಯಂ ಪ್ರೇರಿತವಾಗಿ PIL ದಾಖಲಿಸಿಕೊಂಡ ಹೈಕೋರ್ಟ್​; ವರದಿ ಸಲ್ಲಿಸಲು ಸೂಚನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿರುವ ಕಾಲ್ತುಳಿತದ ಬಗ್ಗೆ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್​ ದಾಖಲಿಸಿಕೊಂಡಿದ್ದು. ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ನೀಡಿದೆ.

ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದ್ದು. ಘಟನೆ ಸಂಬಂಧ ಕಬ್ಬನ್​ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ :ಸರ್ಕಾರ, ಪೊಲೀಸರು, KSCA; ಹನ್ನೊಂದು ಜನರ ಸಾವಿಗೆ ಕಾರಣವಾಯ್ತು ಈ ಮೂರು ಕಾರಣಗಳು

ಆದರೆ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಕೊಂಡಿದ್ದು. ಘಟನೆ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಿದೆ. ಮಧ್ಯಹ್ನ 2:30ಕ್ಕೆ ವಿಚಾರಣೆಯನ್ನ ನಿಗಧಿ ಪಡಿಸಿದೆ. ಘಟನಾ ಸ್ಥಳಕ್ಕೆ ಪೊಲೀಸ್​ ಕಮಿಷನರ್​ ದಯಾನಂದ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ :ಸಂಭ್ರಮಚರಣೆ ವೇಳೆ ಕಾಲ್ತುಳಿತ; ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಅಭಿಮಾನಿಗಳು, ಸಂಚಾರದಲ್ಲಿ ವ್ಯತ್ಯಯ

Exit mobile version