3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್​ ಎನ್​ಕೌಂಟರ್​ನಲ್ಲಿ ಸಾವು

ಲಕ್ನೋ: ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸರ ಎನ್​ಕೌಂಟರ್​​ಗೆ ಬಲಿಯಾಗಿರುವ ಘಟನೆ ಲಕ್ನೋದಲ್ಲಿ ನಡೆದಿದ್ದು. ಸಾವನ್ನಪ್ಪಿದ ಆರೋಪಿಯನ್ನು ದೀಪಕ್​ ವರ್ಮಾ ಎಂದು ಗುರುತಿಸಲಾಗಿದೆ.

ಲಕ್ನೋದ ಅಲಂಬಾಗ್ ಪ್ರದೇಶದಲ್ಲಿ ಬಾಲಕಿ ತನ್ನ ಪೋಷಕರ ಜೊತೆಗೆ ಚಂದಾನಗರ ಮೆಟ್ರೋ ನಿಲ್ದಾಣದ ಬಳಿ ಮಲಗಿದ್ದಳು. ಈ ವೇಳೆ ಆರೋಪಿ ದೀಪಕ್​ ವರ್ಮಾ ಬೆಳಗಿನ ಜಾವ 3:30ಕ್ಕೆ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಪ್ರಜ್ಞಾಹೀನಳಾಗಿದ್ದ ಬಾಲಕಿಯನ್ನ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಪೋಷಕರು ಮಗಳಿಗಾಗಿ ಹುಡುಕಾಟ ನಡೆಸಿದಾಗ ಮೆಟ್ರೋ ಸೇತುವೆ ಬಳಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ :ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮೋದಿ; ಕಾಶ್ಮೀರದಲ್ಲಿ ರಾರಾಜಿಸಿ ತಿರಂಗ

ಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ ಆರೋಪಿ ಬಂಧನಕ್ಕೆ ಪೊಲೀಸ್‌ ತಂಡಗಳನ್ನು ರಚಿಸಲಾಗಿತ್ತು. ಅಷ್ಟೇ ಅಲ್ಲದೇ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಸ್ಕೂಟರ್‌ನ ನೋಂದಣಿ ವಿವರಗಳು ಮತ್ತು ಸುಳಿವು ಆಧರಿಸಿ ಕಂಟೋನ್ಮೆಂಟ್‌ನ ದೇವಿ ಖೇಡಾ ಬಳಿ ಪೊಲೀಸರು ದೀಪಕ್‌ನನ್ನು ತಡೆದು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ :ನಾವು ರಾಜೀನಾಮೆ ಕೊಡ್ತೀವಿ; ಪಹಲ್ಗಾಂ, ಕುಂಭಮೇಳದ ಘಟನೆಗೆ ಅವರು ರಾಜಿನಾಮೆ ಕೊಡ್ಲಿ;​ ಖರ್ಗೆ

ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆತ ಮೃತಪಟ್ಟಿದ್ದಾನೆ ಎಂದು ಪ್ರಕಟಿಸಿದ್ದಾರೆ. ಬಾಲಕಿಯ ಖಾಸಗಿ ಭಾಗಗಳಿಗೆ ತೀವ್ರ ಗಾಯಗಳಾಗಿದ್ದು, ಲೋಕಬಂಧು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ಗಣನೀಯ ಪ್ರಮಾಣದಲ್ಲಿ ರಕ್ತ ಸೋರಿಕೆಯಾಗಿದೆ. ವೈದ್ಯರು ಪ್ಲಾಸ್ಟಿಕ್‌ ಸರ್ಜರಿಯ ಅಗತ್ಯವಿದೆ ಎಂದು ಹೇಳಿದ್ದಾರೆ.

 

RELATED ARTICLES

Related Articles

TRENDING ARTICLES