ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಪ್ರಕರಣದಲ್ಲಿ ಕೆಎಸ್‌ಸಿಎ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಂದಿನ ವಿಚಾರಣೆಯನ್ನು ಜೂನ್ 16ಕ್ಕೆ ಮುಂದೂಡಲಾಗಿದೆ.
ವಿಜಯೋತ್ಸವ ಕಾರ್ಯಕ್ರಮ ಆಯೋಜನೆಯಲ್ಲಿ ನಿರ್ಲಕ್ಷ ವಹಿಸಿದ ಆರೋಪದ ಮೇಲೆ ಆರ್‌ಸಿಬಿ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಮತ್ತು ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ಗಳ ವಿರುದ್ದ ಪ್ರಕರಣ ದಾಖಲಿಸಿ ನಾಲ್ವರು ಆರೋಪಿಗಳನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದರು. ಆರೋಪಿಗಳು ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕೆಎಸ್‌ಸಿಎ ಅಧಿಕಾರಿಗಳಿಗೆ ರಿಲೀಫ್ ಕೊಟ್ಟಿದೆ. ಇದನ್ನೂ ಓದಿ :ಒತ್ತಡ ಹೇರಿ ಕಾರ್ಯಕ್ರಮ ಆಯೋಜನೆ; ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ್ ರಾಜು ತಲೆದಂಡ
ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಾಧೀಶ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ, ಕೆಎಸ್‌ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ಆದರೆ, ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ. ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್.ಜೈರಾಮ್ ಅವರಿಗೆ ರಿಲೀಫ್ ಸಿಕ್ಕಿದೆ. ಇನ್ನು ಆರ್‌ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಅರ್ಜಿ ವಿಚಾರಣೆಯನ್ನು ನ್ಯಾಯಲಯ ಸೋಮವಾರಕ್ಕೆ(ಜೂ.06) ಮುಂದೂಡಲಾಗಿದ್ದು. ಇದನ್ನೂ ಓದಿ :ಪೊಲೀಸ್ ಅಧಿಕಾರಿಗಳ ತಲೆದಂಡ; ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ


