Site icon PowerTV

ಪೊಲೀಸ್​ ಕಮಿಷನರ್​ ದಯಾನಂದ ಅಮಾನತು; ಸರ್ಕಾರದ ವಿರುದ್ದ ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

ಮಂಡ್ಯ: ಪೊಲೀಸ್​ ಕಮಿಷನರ್ ಸೇರಿದಂತೆ ಐವರು ಪೊಲೀಸ್​ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು. ಇದನ್ನು ಖಂಡಿಸಿ ಹೆಡ್​ ಕಾನ್ಸ್ಟೇಬಲ್​ ಒಬ್ಬರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ಹೆಡ್‌ ಕಾನ್ಸ್‌ಟೇಬಲ್‌ ನರಸಿಂಹರಾಜು ಎಂಬುವವರು ರಾಜ್ಯ ಸರ್ಕಾರದ ನಿರ್ಧಾರವನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದು. ರಾಜ್ಯಪಾಲರಿಗೆ ಸರ್ಕಾರದ ನಡೆ ಖಂಡಿಸಿ ದೂರು ನೀಡಲು ತೆರಳಿದ್ದರು. ಈ ವೇಳೆ ಕಾನ್ಸ್ಟೇಬಲ್​ ನರಸಿಂಹರಾಜು ಕೈಗೆ ಕಪ್ಪುಪಟ್ಟಿ ಧರಿಸಿ, ಅಂಬೇಡ್ಕರ್​ ಪೋಟೊ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ :‘ಟ್ರಂಪ್​ ಚುನಾವಣೆ ಗೆದ್ದಿದ್ದೇ ನನ್ನಿಂದ’; ಟ್ರಂಪ್​ ವಿರುದ್ದ ತಿರುಗಿ ಬಿದ್ದ ಎಲಾನ್ ಮಸ್ಕ್​..!

ದೂರಿನಲ್ಲಿ ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಈ ಮೂಲಕ ಪೊಲೀಸ್‌ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಬರೆದಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಇವರನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ :ಪೊಲೀಸ್ ಅಧಿಕಾರಿಗಳ ತಲೆದಂಡ; ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್​ ನಿಂಬಾಳ್ಕರ್​ ಎತ್ತಂಗಡಿ

ಬುಧವಾರ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಜನರಲ್ಲಿ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ಈ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಗುರುವಾರ ಆದೇಶ ಹೊರಡಿಸಿತ್ತು.

 

 

Exit mobile version