Thursday, August 21, 2025
Google search engine
HomeASTROLOGYಭೀಕರ ಕಾಲ್ತುಳಿತ ಪ್ರಕರಣ; ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಜಿ ರಾಜೀನಾಮೆ

ಭೀಕರ ಕಾಲ್ತುಳಿತ ಪ್ರಕರಣ; ಕೆಎಸ್​ಸಿಎ ಕಾರ್ಯದರ್ಶಿ, ಖಜಾಂಜಿ ರಾಜೀನಾಮೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ನೈತಿಕ ಹೊಣೆಯುತ್ತು ಕರ್ನಾಟಕ ರಾಜ್ಯ ಕ್ರಿಕೆಟ್​ ಅಸೋಸಿಯೇಶನ್​ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.ಕೆಎಸ್​ಸಿಎ ಕಾರ್ಯದರ್ಶಿ ಮತ್ತು ಖಜಾಂಜಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿ; ವಿಷ ಹಾಕಿ ಕುಟುಂಬವನ್ನೇ ಮುಗಿಸಲು ಪ್ಲಾನ್​ ರೂಪಿಸಿದ ಖತರ್ನಾಕ್​ ಪತ್ನಿ

ಜೂನ್​ 4ರಂದು ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿಯ ಮಾರ್ಕೇಟಿಂಗ್​ ಹೆಡ್​ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು. ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ

ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ ಸಂಸ್ಥೆ ಹಾಗೂ ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದನ್ನೂ ಓದಿ: ಪ್ರಿಯಕರನೊಂದಿಗೆ ಪತ್ನಿ ಚಕ್ಕಂದ; ಕೊ*ಲೆ ಮಾಡಿ ರುಂಡದೊಂದಿಗೆ ಪೊಲೀಸ್​ ಠಾಣೆಗೆ ಬಂದ ಪತಿ

ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್‌ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್‌ಸಿಬಿ ಮ್ಯಾನೇಜ್‌ಮೆಂಟ್‌, ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್ ‌ಹಾಗೂ ಕೆಎಸ್‌ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್‌ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments