ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸಿಎಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು. ‘ಸಿದ್ದರಾಮಯ್ಯ ಒಬ್ಬ ಹೇಡಿ, ಅಸಹಾಯಕ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ “ಸಿದ್ದರಾಮಯ್ಯ ಒಬ್ಬ ಹೇಡಿ, ಅಸಹಾಯಕ ಮುಖ್ಯಮಂತ್ರಿ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಬಹಳ ಸ್ಟ್ರಾಂಗ್ ಇದ್ದರು. ಆದರೆ ಈಗ ಸಂಪೂರ್ಣವಾಗಿ ಕಳೆದು ಹೋಗಿದ್ದಾರೆ. ಇಡೀ ಪ್ರಕರಣದಲ್ಲಿ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಮತ್ತು ಪರಮೇಶ್ವರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಿದೆ, ತಪ್ಪು ಮಾಡಿರುವವರೇ ಇವರು ಎಂದು ಹೇಳಿದರು.
ಇದನ್ನೂ ಓದಿ :ಬಕ್ರೀದ್ ಸಂಭ್ರಮ; 5 ಲಕ್ಷ ಮೊತ್ತಕ್ಕೆ ಮೇಕೆ ಮಾರಾಟ ಮಾಡಿದ ರೈತ ಫುಲ್ ಖುಷ್
ಮುಂದುವರಿದು ಮಾತನಾಡಿದ ಭಾಸ್ಕರ್ ರಾವ್ “ಕೇಂದ್ರ ಸರ್ಕಾರ ಕೊಟ್ಟ ಕಾನೂನುನನ್ನ ರಾಜ್ಯ ಸರ್ಕಾರ ದುರುಪಯೋಗ ಪಡಿಸಿಕೊಂಡು ಐಎಎಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ. ಇದು ದಯಾನಂದ್ಗೆ ಸೀಮಿತವಾದ ವಿಚಾರವಲ್ಲ. ಇಡೀ ಪೊಲೀಸ್ ಇಲಾಖೆಯ ಕಗ್ಗೊಲೆ ಮಾಡಿದ್ದಾರೆ. ಪೊಲೀಸರ ನೈತಿಕ ಸ್ಥೈರ್ಯವನ್ನೇ ಸಿದ್ದರಾಮಯ್ಯ ಕುಗ್ಗಿಸಿದ್ದಾರೆ. ಹೀಗೆ ಎಷ್ಟು ಜನರ ಮೇಲೆ ಕ್ರಮ ತೆಗೆದುಕೊಳ್ಳುತ್ತಾ ಹೋಗುತ್ತೀರಾ. ತೀರಾ ಅವಮಾನಕರ ರೀತಿಯಲ್ಲಿ ದಯಾನಂದ ಅವರನ್ನ ನಡೆಸಿಕೊಂಡಿದ್ದೀರಾ.
ಇದನ್ನೂ ಓದಿ :ಸನ್ಮಾನದ ಅವಶ್ಯಕತೆ ಇತ್ತ, 50 ರೂಪಾಯಿ ಪೇಟ ಹಾಕಿ, ಅವಮಾನ ಮಾಡಿ ಕಳ್ಸಿದ್ದೀರಾ: HD ಕುಮಾರಸ್ವಾಮಿ
ಅವರ ಮೇಲೆ ನಿಮಗೆ ಕೋಪ ಬಂದಿದ್ದರೆ ವರ್ಗಾವಣೆ ಮಾಡಬಹುದಿತ್ತು, ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು. ಅದನ್ನ ಬಿಟ್ಟು ಅಮಾನತು ಮಾಡಿದ್ದು ಸರಿಯಲ್ಲ. ಐಪಿಎಲ್ ಏನು ರಾಜ್ಯ ಮತ್ತು ದೇಶದ ಪಂದ್ಯಾವಳಿನ.ಅದೊಂದು ಕ್ಲಬ್ ಪಂದ್ಯಾ ಅಷ್ಟೇ. ಅದಕ್ಕೆ ಡಿ.ಕೆ ಶಿವಕುಮಾರ್ ಹೋಗಿದ್ದಾನೆ, ಕಪ್ ಎತ್ತುಕೊಂಡು ಮುತ್ತಿಕಿದ್ದಾರೆ, ಇದೆಲ್ಲಾ ಸಿಎಂಗೆ ಗೊತ್ತಾಗಲಿಲ್ವಾ ಎಂದು ಭಾಸ್ಕರ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.