Site icon PowerTV

ವಿಮಾನ ದುರಂತ: 242 ಜನರ ಪೈಕಿ 105 ಜನ ಸಾವು, ಮುಂದುವರಿದು ರಕ್ಷಣಾ ಕಾರ್ಯಾಚರಣೆ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್​ನ ಮೇಘಾನಿಯಲ್ಲಿ ವಿಮಾನ ದುರಂತ ಉಂಟಾಗಿದ್ದು. ಏರ್​ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದ್ದು. ಉಳಿದರವ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ದೊರೆಯಬೇಕಿದೆ.

ವಿಮಾನ ಮಧ್ಯಾಹ್ನ 1.17 ಕ್ಕೆ ಟೇಕ್ ಆಫ್ ಆಗಿತ್ತು. ವಿಮಾನ ನಿಲ್ದಾಣದ ಬಳಿಯ ಸರಕು ಕಚೇರಿಯಲ್ಲಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಕಟ್ಟಡವೂ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ 242 ಜನರಲ್ಲಿ ಇಬ್ಬರು ಪೈಲಟ್‌ಗಳು ಮತ್ತು 2 ಮಕ್ಕಳು ಸೇರಿದಂತೆ 8 ಸಿಬ್ಬಂದಿ ಇದ್ದರು. ಇದನ್ನೂ ಓದಿ:ಹುಡುಗಿಗಾಗಿ ಹಾಲಿ ಲವ್ವರ್-ಮಾಜಿ ಲವ್ವರ್​ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

242 ಜನರ ಪೈಕಿ 105 ಜನ ಸಾವನ್ನಪ್ಪಿದ್ದಾರೆ ಎಂದು ಗುಜರಾತ್​ ಪೊಲೀಸ್​ ಇಲಾಖೆ ಮಾಹಿತಿ ಹಂಚಿಕೊಂಡಿದ್ದು. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ಮೃತದೇಹಗಳನ್ನ ಸ್ಥಳಾಂತರ ಮಾಡಿದ್ದು. ಗಾಯಾಳುಗಳನ್ನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನು ಪತನಗೊಂಡಿರುವ ವಿಮಾನದಲ್ಲಿ 169 ಮಂದಿ ಭಾರತೀಯ ಪ್ರಜೆಗಳು, 53 ಬ್ರಿಟನ್​ ಪ್ರಜೆಗಳು, 7 ಮಂದಿ ಪೋರ್ಚುಗೀಸ್​ ಪ್ರಜೆಗಳು ಮತ್ತು, ಕೆನಡಾದ ಓರ್ವ ಪ್ರಜೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

Exit mobile version