ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ; ಸಿಎಂ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು, ಆಗಸ್ಟ್ 19, 2026:

– ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಮಾಜಿ ಶಾಸಕ ಬಿ.ಸಿ.

ನಾಗೇಶ್ (B C Nagesh Death) ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣ್ಯರು ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ.

ಪ್ರಮುಖ ಅಂಶಗಳು

  • ನಾಗೇಶ್ (B C Nagesh Death) ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಶ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಗೇಶ್ ಅವರು ಅಜಾತಶತ್ರುವಾಗಿದ್ದರು. ಎಲ್ಲರನ್ನೂ ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಅವರ ಅಗಲಿಕೆ ಬಿಜೆಪಿಗೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಎಂಎಲ್‌ಸಿ ಸಿ.ಟಿ ರವಿ ಕೂಡ ಮಾತನಾಡಿ, ಬಿ.ಸಿ. ನಾಗೇಶ್ ಅವರು ಮೃದು ಹೃದಯದ ವ್ಯಕ್ತಿ. ರಾಜಕೀಯ ಮೀರಿ ಜನಪ್ರೀತಿ ಸಂಪಾದಿಸಿದ್ದರು. ಒಬ್ಬ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇವೆ. ಶಾಸಕರಾಗುವ ಮುನ್ನವೇ ಎಬಿವಿಪಿಯಲ್ಲಿ ಸೇವೆ ಸಲ್ಲಿಸಿದ್ದ ನಾಗೇಶ್, ಕೊನೆಯವರೆಗೂ ಪಕ್ಷ ಹಾಗೂ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES