ಪೊಲೀಸರ ಸೋಗಿನಲ್ಲಿ ಬಂದ ಮೂವರಿಂದ 17ರ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಂಗಳೂರು, ಸೆಪ್ಟೆಂಬರ್ 22, 2026:

ನವದೆಹಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು ಅಪರಿಚಿತರು 17 ವರ್ಷದ ಬಾಲಕಿಯ (Crime) ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಾಲಕಿ ತನ್ನ ಸ್ನೇಹಿತನೊಂದಿಗೆ ದೆಹಲಿಯ ಕಲ್ಕಾಜಿ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ. ಕಲ್ಕಾಜಿ ಮಂದಿರದಲ್ಲಿ ದರ್ಶನ ಪಡೆದ ನಂತರ ಇಬ್ಬರೂ ಸಂಜೆ 7:30ರ ಸುಮಾರಿಗೆ ದೇವಾಲಯದ ಬಳಿಯ ಉದ್ಯಾನವನಕ್ಕೆ ತೆರಳಿದ್ದರು. ಈ ವೇಳೆ 25 ರಿಂದ 30 ವರ್ಷ ವಯಸ್ಸಿನ ಮೂವರು ಅಪರಿಚಿತರು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ.

ಯುವಕರು ತಾವು ಪೊಲೀಸರೆಂದು ಹೇಳಿ ಇಬ್ಬರನ್ನು ಬೆದರಿಸಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ದೆಹಲಿ ನಿವಾಸಿಯಾಗಿರುವ ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಹುಡುಕಾಟದಲ್ಲಿರುವ ಪೊಲೀಸರು, ಘಟನೆ ನಡೆದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

 

ಹೆಚ್ಚಿನ ಸುದ್ದಿಗಳಿಗಾಗಿ Power TV ಜೊತೆ ಇರಿ.

RELATED ARTICLES

Related Articles

TRENDING ARTICLES