ತೀವ್ರ ಸ್ವರೂಪ ಪಡೆಯುತ್ತಿದೆ ಗುಜ್ಜರ ಸಮುದಾಯ ಹೋರಾಟ

0
188

ಜೈಪುರ: ಗುಜ್ಜಾರ ಸಮುದಾಯಕ್ಕೆ ಮೀಸಲಾತಿಗಾಗಿ ರಾಜಸ್ಥಾನದಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.5 ಮೀಸಲು ನೀಡಬೇಕೆಂದು ಆಗ್ರಹಿಸಿ, ಗುಜ್ಜಾರ ಆರಕ್ಷಣ ಸಮಿತಿ ಮುಖಂಡ ಕಿರೋರಿ ಸಿಂಗ್ ಬನ್ಸಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಫೆಬ್ರವರಿ 8ರಂದು ಶುರುವಾದ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಭಟನೆಯಿಂದಾಗಿ ರಾಜಸ್ಥಾನದಲ್ಲಿ ಇದುವರೆಗೂ ಸುಮಾರು 200 ರೈಲ್ವೆ ಒಡಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ 2 ಪೊಲೀಸ್ ಜೀಪ್ ಮತ್ತು ಒಂದು ಪೊಲೀಸ್​ ಬಸ್​ ಬೆಂಕಿಗಾಹುತಿಯಾಗಿದೆ. ಆಗ್ರಾ-ಮೊರೇನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಉದ್ರಿಕ್ತರು ಪೊಲೀಸ್ ವಾಹನಗಳಿಗೆ ಬೆಂಕಿಹಚ್ಚಿ ಪರಾರಿಯಾಗಿದ್ದಾರೆ. ಈ ಸಂದರ್ಭ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಟಿಯರ್ ಗ್ಯಾಸ್ ಬಳಸಿದ್ದಾರೆ. 

 

LEAVE A REPLY

Please enter your comment!
Please enter your name here