Home ದೇಶ-ವಿದೇಶ ದೇಶದಲ್ಲಿ 7 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೋನಾ ಪಾಸಿಟಿವ್ : 200ಕ್ಕೂ ಹೆಚ್ಚು ಜನ ಸಾವು

ದೇಶದಲ್ಲಿ 7 ಸಾವಿರಕ್ಕೂ ಅಧಿಕ ಜನರಲ್ಲಿ ಕೊರೋನಾ ಪಾಸಿಟಿವ್ : 200ಕ್ಕೂ ಹೆಚ್ಚು ಜನ ಸಾವು

ನವದೆಹಲಿ: ವಿಶ್ವದ ಸೋಂಕಿತರ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿರುವ ಭಾರತದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಮೊದಲ ಬಾರಿಗೆ  7ಸಾವಿರದ 900ಕ್ಕೂ ಅಧಿಕ ಜನರಿಗೆ ಸೋಂಕು ಬಂದಿರುತ್ತದೆ. ಈ ಮೂಲಕ ದೇಶದಲ್ಲಿ ಈವರೆಗೆ ಒಟ್ಟು 1,73,763 ಜನ ಸೋಂಕಿಗೆ ತುತ್ತಾಗಿದ್ದಾರೆ. ಒಂದೇ ದಿನದಲ್ಲಿ ಕೊರೋನಾ 265 ಜನರನ್ನು ಬಲಿ ಪಡೆದುಕೊಂಡಿದ್ದು, ಒಟ್ಟು 4,971 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರ ನಡುವೆಯೇ 82,370 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲೂ ಕೊರೋನಾ ಸೋಂಕಿತರ ಅಂಕಿಅಂಶಕ್ಕನುಗುಣವಾಗಿ ರಾಜ್ಯಗಳನ್ನು ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ  ಮೊದಲಿನಿಂದಲೇ ಮಹಾರಾಷ್ಟ್ರವೇ ಮುಂಚೂಣಿಯಲ್ಲಿದ್ದು, ಸೋಂಕಿತರ ಸಂಖ್ಯೆಯಲ್ಲೂ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲೇ  2 ಸಾವಿರದ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈವರೆಗೆ 62,228 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು116 ಎಷ್ಟು ಜನ ಸಾವನ್ನಪ್ಪಿದ್ದು, ಈವರೆಗೆ  ಮೃತಪಟ್ಟವರ ಸಂಖ್ಯೆಯೂ 2 ಸಾವಿರದ ಗಡಿ ದಾಟಿದೆ.

ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 874 ರಷ್ಟು ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20,246 ಕ್ಕೆ ಏರಿಕೆಯಾಗಿದೆ. ನಿನ್ನೆಯಿಂದ ಇಂದಿಗೆ 9 ಸಾವನ್ನಪ್ಪಿದ್ದು, ಒಟ್ಟು 154 ಜನ ಸೋಂಕಿತರು ಮೃತಪಟ್ಟಿದ್ದಾರೆ. 11 ಸಾವಿರಕ್ಕೂ ಹೆಚ್ಚು ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಇನ್ನು ದೆಹಲಿ ಹಾಗೂ ಗುಜರಾತ್ ನಡುವೆ  ಸೋಂಕಿತರ ಸಂಖ್ಯೆಯ ಏರಿಕೆಯಲ್ಲಿ ಪೈಪೋಟಿಯಂತಾಗಿದೆ. ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 17 ಸಾವಿರಕ್ಕೆ ಏರಿದ್ದರೆ, ಗುಜರಾತ್​ನಲ್ಲಿ 16  ಸಾವಿರದ ಅಂಚಿನಲ್ಲಿದೆ. ಇನ್ನು ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯೂ ದೆಹಲಿಯಲ್ಲಿ 398, ಗುರಾತ್​ನಲ್ಲಿ 980 ಜನ ಈವರೆಗೆ ಮೃತಪಟ್ಟಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments