ಮುಂಬೈ: ವಿಶ್ವವನ್ನೇ ಬೆಚ್ಚಿಬೀಳಿಸಿರುವ ಡೆಡ್ಲಿ ಕೊರೋನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೋನಾಗೆ ದೇಶದಲ್ಲಿ ಮೂರನೇ ಬಲಿಯಾಗಿದೆ.
ದೇಶಾದ್ಯಂತ ವೇಗವಾಗಿ ಹಬ್ಬುತ್ತಿರುವ ಮಹಾಮಾರಿ ಕೊರೋನಾ ಮಹಾರಾಷ್ಟ್ರದಲ್ಲಿ 64 ವರ್ಷದ ವೃದ್ಧರೊಬ್ಬರನ್ನು ಬಲಿ ಪಡೆದುಕೊಂಡಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾದಂತಾಗಿದೆ. ಇತ್ತೀಚೆಗೆ ಕಲಬುರಗಿಯಲ್ಲಿ ಒಬ್ಬ ವೃದ್ಧ ಹಾಗೂ ದೆಹಲಿಯಲ್ಲಿ ಮಹಿಳೆ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.