ಗಡಿಯಲ್ಲಿ ಮತ್ತೆ ಉಗ್ರರ ಅಟ್ಟಹಾಸ: ನಾಲ್ವರು ಯೋಧರು ಹುತಾತ್ಮ

0
269

ಶ್ರೀನಗರ: ಭಾರತ 40 ವೀರ ಯೋಧರನ್ನು ಕಳೆದುಕೊಂಡಿರುವ ನೋವಿನಲ್ಲಿರುವಾಗಲೇ ಉಗ್ರರು ಮತ್ತೊಮ್ಮೆ ಗಡಿಯಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 40 ಜನ ಯೋಧರು ಹುತಾತ್ಮರಾಗಿ ನಾಲ್ಕು ದಿನಗಳಷ್ಟೇ ಕಳೆದಿದೆ. ಅದರ ಬೆನ್ನಲ್ಲೇ ಉಗ್ರರು ಮತ್ತೊಮ್ಮೆ ಕ್ರೌರ್ಯ ಮೆರೆದಿದ್ದು, ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಪಿಂಗ್ಲಾನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿತ್ತು. ಪ್ರತಿಯಾಗಿ ಉಗ್ರರು ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿ ಕೊನೆಗೊಂಡಿದ್ದು, ಸ್ಥಳದಲ್ಲಿ ಪರಿಶೀಲನೆ ಮುಂದುವರೆದಿದೆ.

LEAVE A REPLY

Please enter your comment!
Please enter your name here