ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹರರಡವುದನ್ನು ತಡೆಯಲು ಅದೆಷ್ಟು ಪ್ರಯತ್ನಪಟ್ಟರೂ ಈ ಮಹಾಮಾರಿ ಮಾತ್ರ ಅಟ್ಟಹಾಸ ಮೆರೆಯುತ್ತಲೇ ಇದೆ. ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 7 ಸಾವಿರದ ಗಡಿ ತಲುಪಿದೆ.
ಕಳೆದ 24 ಗಂಟೆಯಲ್ಲಿ ಒಟ್ಟು 1,035 ಹೊಸ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7,447 ಏರಿಕೆಯಾಗಿದೆ. ಒಂದೇ ದಿನದಲ್ಲಿ ಇಷ್ಟು ಪ್ರಕರಣಗಳು ಪತ್ತೆಯಾಗಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ. 7,447 ಪ್ರಕರಣಗಳಲ್ಲಿ 643 ಪ್ರಕರಣಗಳು ಗುಣಮುಖವಾಗಿದ್ದು, ಇದರಲ್ಲಿ 6,565 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಗಂಟೆಯಲ್ಲಿ 40 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಸೋಂಕಿತರ ಸಾವಿನ ಸಂಖ್ಯೆ 239ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಕೇಂದ್ರ ಸಚಿವಾಲಯ ಮಾಹಿತಿ ನೀಡಿದೆ.
3acceptance