Home ದೇಶ-ವಿದೇಶ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ ಫೊನಿ - 5 ಮಂದಿ ಸಾವು

ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಿದ ಫೊನಿ – 5 ಮಂದಿ ಸಾವು

ಭುವನೇಶ್ವರ: ಓಡಿಶಾ ಕಡಲ ತೀರದಲ್ಲಿ ಫೊನಿ ಚಂಡಮಾರುತಕ್ಕೆ ಐವರು ಬಲಿಯಾಗಿದ್ದಾರೆ. ಓಡಿಶಾದ ಪುರಿ, ಪಾರಾದೀಪ್​ ಸೇರಿದಂತೆ ಕಡಲ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ಗಂಟೆಗೆ 175 ಕಿ.ಮೀ. ವೇಗದಲ್ಲಿ ಅಪ್ಪಳಿಸಿದ ಚಂಡಮಾರುತಕ್ಕೆ ಜನ ತತ್ತರಿಸಿದ್ದಾರೆ.

ಪುರಿ ನಗರ ಹಾದಿ ಬೀದಿಗಳಲ್ಲಿ ಬಿರುಗಾಳಿಯ ಭಯಾನಕ ಪರಿಣಾಮ ಕಂಡುಬಂದಿದ್ದು, ಮನೆ ಬಿಟ್ಟು ಯಾರೂ ಹೊರಬರದಂತೆ ಭದ್ರತಾ ಪಡೆ ಎಚ್ಚರಿಸಿದೆ. ಕಡಲ ತೀರದ 10 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಚೆನ್ನೈ ಮತ್ತು ವಿಶಾಖಪಟ್ಟಣದಲ್ಲಿ ಮುಂಜಾಗೃತಾ ಕ್ರಮವಾಗಿ ಹೆಲಿಕಾಪ್ಟರ್​ ಸನ್ನದ್ಧವಾಗಿದೆ. ತುರ್ತು ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್​ಗಳ ಸಿದ್ಧತೆ ಮಾಡಿಕೊಳ್ಳಲಾಗಿದ್ದು ರಿಲೀಫ್​ ಸಾಮಗ್ರಿ ಜೊತೆ ಮೂರು ವಾರ್​ ಶಿಪ್​ ಕೂಡ ಸನ್ನದ್ಧ ಸ್ಥಿತಿಯಲ್ಲಿದೆ. ಪೂರ್ವ ಮತ್ತು ದಕ್ಷಿಣ ಕರಾವಳಿ ತೀರ ಪ್ರದೇಶದ 10 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments