ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ.
ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ ಧಣಿವಾರಿಸಿಕೊಳ್ಳಲು ತಾತಾ ಕುಳಿತಿದ್ದಾಗ, ಬಾಲಕಿ ಅಲ್ಲೇ ಇದ್ದ ಮತ್ತೊಂದು ಮಗುವಿನೊಂದಿಗೆ ಆಟವಾಡುತ್ತಿದ್ದಳು. ಹಾಗೇ ಆ ಮಗುವಿನ ಜೊತೆ ತಾತನ ಗಮನಕ್ಕೆ ಬರದಂತೆ ಬಸ್ ಹತ್ತಿ ಹೋಗಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿ ಕಂಡುಬಂದಲ್ಲಿ ಆಕೆಯ ಮಾವ ಭರಣಿ ಕುಮಾರ್ ( 9591538581) ಅವರನ್ನು ಅಥವಾ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.