ದೇಶದಲ್ಲಿ ಸೋಂಕಿತರ ಸಂಖ್ಯೆ 1,06,750 ಕ್ಕೆ ಏರಿಕೆ : ಕಳೆದ 24 ಗಂಟೆಯಲ್ಲಿ 5 ಸಾವಿರಕ್ಕೂ ಅಧಿಕ ಕೊರೋನಾ ಪಾಸಿಟಿವ್

0
352

ನವದೆಹಲಿ: ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೋವಿಡ್-19ಗೆ ತುತ್ತಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 5,611 ಜನರಲ್ಲಿ ಸೋಂಕಿಗೆ ತುತ್ತಾಗಿದ್ದು, ಸೋಂಕಿತರ ಸಂಖ್ಯೆ 1,06,750 ಜನರಲ್ಲಿ ಸೋಂಕು ದೃಢಪಟ್ಟಿದೆ. ಈವರೆಗೆ ಸೋಂಕಿನಿಂದ ಒಟ್ಟು 3,303 ಜನ ಮೃತಪಟ್ಟಿದ್ದಾರೆ. 1 ಲಕ್ಷ ಸೋಂಕಿತರಲ್ಲಿ 42,298 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದ ಸೋಂಕಿತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಮಹಾರಾಷ್ಟ್ರದಲ್ಲಿ ಕೇವಲ 24 ಗಂಟೆಯಲ್ಲಿ 2,078 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ 37,136 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಹೆಚ್ಚಾಗಿದ್ದು, 1,325 ಏರಿಕೆಯಾಗಿದೆ. ಇದರ ನಡುವೆ 9,639 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇನ್ನು ಎರಡನೇ ಸ್ಥಾನದಲ್ಲಿದ್ದ ಗುಜರಾತನ್ನು ಹಿಂದಿಕ್ಕಿ ತಮಿಳುನಾಡು ಎರಡನೇ ಸ್ಥಾನಕ್ಕೆ ಬಂದು ತಲುಪಿದೆ. ಇಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದ್ದು, ತಮಿಳುನಾಡು ಹಾಗೂ ಗುಜರಾತ್​ ನಡುವೆ ಪೈಪೋಟಿ ನಡೆಯುತ್ತಿದೆ. ನಿನ್ನೆಯಿಂದ ಇಂದಿಗೆ 688 ಜನರಲ್ಲಿ ಸೋಂಕು ಪತ್ತೆಯಾಗಿ ಸೋಂಕಿತರ ಸಂಖ್ಯೆ 12,448 ಕ್ಕೆ ಏರಿಕೆಯಾಗಿದೆ. ಈವರೆಗೆ 84 ಜನ ಸಾವನ್ನಪ್ಪಿದ್ದು, 4,895 ಜನ  ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಗುಜರಾತ್​ ಮೂರನೇ ಸ್ಥಾನಕ್ಕೆ ಇಳಿದಿದೆ. ಸೋಂಕಿತರ ಸಂಖ್ಯೆ 12,140 ಕ್ಕೆ ಏರಿದ್ದು, ಒಂದೇ ದಿನಕ್ಕೆ 395 ರಷ್ಟು ಸೋಂಕಿತರು ಹೆಚ್ಚಾಗಿದ್ದಾರೆ. ಅಲ್ಲದೆ ಈವರೆಗೆ ಒಟ್ಟು 719 ಜನ ಸೋಂಕಿತರು ಮೃತಪಟ್ಟಿದ್ದಾರೆ. ಈ ಮಧ್ಯೆ 5,043 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇನ್ನು ದೆಹಲಿಯು ನಾಲ್ಕನೇ ಸ್ತಾನದಲ್ಲಿದ್ದು, ಸೋಂಕಿತರ ಸಂಖ್ಯೆ 10, 554 ಕ್ಕೇರಿದ್ದು, ಕಳೆದ 24 ಗಂಟೆಯಲ್ಲಿ 500 ಜನರಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಇಂದಿನವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಹಾಗಾಗಿ ಈವರೆಗೆ ದೆಹಲಿಯಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 168 ಆಗಿದೆ. ಈವರೆಗೆ 4,750 ಜನ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here