ದೇಶದಲ್ಲಿ ಸೋಂಕಿತರ ಸಂಖ್ಯೆ 1,18,447 ಕ್ಕೆ ಏರಿಕೆ : ಕಳೆದ 24 ಗಂಟೆಯಲ್ಲಿ 6 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಪಾಸಿಟಿವ್

0
317

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ತನ್ನ ಕದಂಬ ಬಾಹುವನ್ನು ಚಾಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 6,088 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 1,18,447 ಜನರು ಸೋಂಕಿಗೆ ತುತ್ತಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 148 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇವೆಲ್ಲದರ ನಡುವೆ 48,534 ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ದೇಶದ ಸೋಂಕಿತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 41,642ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೂ ಮಹಾರಾಷ್ಟ್ರದಲ್ಲಿ ಸೋಂಕಿನಿಂದ 1,454 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇನ್ನು ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಕಳೆದ 24 ಗಂಟೆಯಲ್ಲಿ 776 ಜನರಲ್ಲಿ ಸೋಂಕು ದೃಢಪಟ್ಟಿದೆ.  ಇನ್ನು ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆಯೂ 94 ಕ್ಕೆ ಏರಿಕೆಯಾಗಿದೆ.

ಗುಜರಾತ್​ನಲ್ಲಿ ಸೋಂಕಿತರ ಸಂಖ್ಯೆ 12,905 ಕ್ಕೆ ಏರಿಕೆಯಾಗಿದ್ದು, ನಿನ್ನೆಯಿಂದ ಇಂದಿಗೆ 368 ಜನ ಸೋಂಕಿಗೆ ತುತ್ತಾಗಿದ್ದಾರೆ. ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 24 ಜನ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 773 ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ 571 ಜನ ಸೋಂಕಿಗೆ ತುತ್ತಾಗಿ ಸೋಂಕಿತರ ಸಂಖ್ಯೆ 11,659 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಸೋಂಕಿನಿಂದ 194 ಜನ ಸಾವನ್ನಪ್ಪಿದ್ದಾರೆ. ಇವೆಲ್ಲದರ ನಡುವೆ ಸೋಂಕಿನಿಂದ ಒಟ್ಟು 5,567 ರಷ್ಟು ಜನ ಗುಣಮುಖರಾಗಿದ್ದಾರೆ.  

LEAVE A REPLY

Please enter your comment!
Please enter your name here