ನವದೆಹಲಿ: ದೇಶದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 6,387 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಒಟ್ಟು 1,51, 767 ಜನರು ಸೋಂಕಿಗೆ ತುತ್ತಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 170 ಜನರು ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು 4,337 ಸೋಂಕಿತರು ಸಾವನ್ನಪ್ಪಿದ್ದಾರೆ. ಇವೆಲ್ಲದರ ನಡುವೆ 64,426 ಜನ ಸೋಂಕಿತರು ಚೇತರಿಸಿಕೊಂಡಿದ್ದಾರೆ.
ದೇಶದ ಸೋಂಕಿತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 54,758 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೂ ಮಹಾರಾಷ್ಟ್ರದಲ್ಲಿ ಸೋಂಕಿನಿಂದ 1,792 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇನ್ನು ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಲ್ಲಿ ಕಳೆದ 24 ಗಂಟೆಯಲ್ಲಿ 646 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆಯೂ 127 ಕ್ಕೆ ಏರಿಕೆಯಾಗಿದೆ.
ಗುಜರಾತ್ನಲ್ಲಿ ಸೋಂಕಿತರ ಸಂಖ್ಯೆ 14,821ಕ್ಕೆ ಏರಿಕೆಯಾಗಿದ್ದು, ನಿನ್ನೆಯಿಂದ ಇಂದಿಗೆ 361 ಜನ ಸೋಂಕಿಗೆ ತುತ್ತಾಗಿದ್ದಾರೆ. ಈವರೆಗೆ ಸೋಂಕಿನನಿಂದ ಮೃತಪಟ್ಟವರ ಸಂಖ್ಯೆಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 27 ಜನ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 915 ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿ 412 ಜನ ಸೋಂಕಿಗೆ ತುತ್ತಾಗಿ ಸೋಂಕಿತರ ಸಂಖ್ಯೆ 14,465 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಸೋಂಕಿನಿಂದ 288 ಜನ ಸಾವನ್ನಪ್ಪಿದ್ದಾರೆ. ಇವೆಲ್ಲದರ ನಡುವೆ ಸೋಂಕಿನಿಂದ ಒಟ್ಟು 7,223 ರಷ್ಟು ಜನ ಗುಣಮುಖರಾಗಿದ್ದಾರೆ.
1syphilis