Home ದೇಶ-ವಿದೇಶ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ  : ಸತತ 7ನೇ ಬಾರಿ  ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ  : ಸತತ 7ನೇ ಬಾರಿ  ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಇಂದು 74ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ.  ಕಳೆದ 73 ವರ್ಷಗಳಿಂದ ಪ್ರತಿವರ್ಷ ಈ ದಿನವನ್ನು ಬಹಳ  ವಿಜೃಂಭಣೆಯಿಂದ ಆಚರಿಸಿದ್ದೆವು. ಆದರೆ, ಈ ಬಾರಿ ಕೊರೋನಾ ಕಾರಣದಿಂದ  ಈ ಹಿಂದಿನ ಆಚರಣೆಗಳಂತೆ ಈ ಸಲದ ಸ್ವಾತಂತ್ರ್ಯ ಹಬ್ಬದ ಆಚರಣೆ ಇಲ್ಲ. ಸಾರ್ವಜನಿಕರು ಗುಂಪು ಸೇರದೆ ಈ ರಾಷ್ಟ್ರೀಯ ಹಬ್ಬವನ್ನು ಆಚರಿಸುತ್ತಿದ್ದಾರೆ. ಗುಂಪು ಗುಂಪಾಗಿ , ಹೆಚ್ಚು ಹೆಚ್ಚು ಜನ ಸೇರಿ ಆಚರಣೆ ಇಲ್ಲದಿದ್ದರೂ ಸಂಭ್ರಮ, ಸಡಗರ ಎಲ್ಲೆಡೆ ಇದೆ. 

ಇದು ಪ್ರತಿಯೊಬ್ಬ ಭಾರತೀಯನು ಸಂಭ್ರಮಿಸುವ ಸುದಿನ. ದೇಶದೆಲ್ಲೆಡೆ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರೀಯ ಹಬ್ಬವನ್ನು  ಆಚರಿಸಲಾಗುತ್ತದೆ. ದೇಶದ ಸಮಸ್ತ ಪ್ರಜೆಗಳ ಪ್ರತಿನಿಧಿಯಾಗಿ ಪ್ರಧಾನಮಂತ್ರಿಗಳು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡುತ್ತಾರೆ.  ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಪ್ರಧಾನಿಯಾಗಿ ಸತತ 7ನೇ ವರ್ಷ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ  ಮಾತನಾಡಿದ ಮೋದಿ, ಸ್ವಾತಂತ್ರ್ಯಕ್ಕಾಗಿ ನಡೆದ  ಹೋರಾಟ ಭವಿಷ್ಯದ ಭಾರತಕ್ಕೆ ಸದಾ ಪ್ರೇರಣೆ. ಮಾರಕ ಕೊರೋನಾ ವೈರಸ್ , ಪ್ರವಾಹ ಮೊದಲಾದ ಸಮಸ್ಯೆಗಳನ್ನು ಎದುರಿಸುತ್ತಿರುವ ಭಾರತ ಎಲ್ಲಾ ಸಂಕಷ್ಟಗಳೆದುರು ವಿಜಯಿಯಾಗಲಿದೆ ಎಂದರು.

ದಾಸ್ಯದ ಸಂಕೋಲೆಯನ್ನು ತೊಡೆದು ಹಾಕಲು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ್ರು. ಅವರ ಕನಸನ್ನು ಈಡೇರಿಸಲು ನಾವೆಲ್ಲಾ ಒಟ್ಟಾಗಿ ದುಡಿಯಬೇಕಿದೆ ಎಂದು ಕರೆ ನೀಡಿದರು.

ಸ್ವಾತಂತ್ರ್ಯ ವೀರರ ತ್ಯಾಗ ಬಲಿದಾನಗಳಿಗೆ ನೈಜ ಅರ್ಥ ಕಲ್ಪಿಸಲಬೇಕಾದರೆ ಭಾರತ ಆತ್ಮ ನಿರ್ಭರವಾಗಬೇಕು. ಸ್ವಾವಲಂಬನೆ ಸಾಧಿಸಬೇಕು. ನವ ಭಾರತದ ಶಕ್ತಿಯನ್ನು ಇಡೀ ವಿಶ್ವ ಬೆರಗುಗಣ್ಣಿಂದ ನೋಡುತ್ತಿದ್ದು, ನಮ್ಮ ಶಕ್ತಿ ಜಾಗತಿಕ ಒಳಿತಿಗಾಗಿ ಬಳಕೆಯಾಗಲಿದೆ ಅಂತ ಭರವಸೆಯ ನುಡಿಗಳನ್ನಾಡಿದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments