Home ರಾಜ್ಯ ಕೆ.ಜಿ ಹಳ್ಳಿ ಗಲಭೆ : 81 ಆರೋಪಿಗಳು ಬಳ್ಳಾರಿ ಜೈಲಿಗೆ

ಕೆ.ಜಿ ಹಳ್ಳಿ ಗಲಭೆ : 81 ಆರೋಪಿಗಳು ಬಳ್ಳಾರಿ ಜೈಲಿಗೆ

ಬಳ್ಳಾರಿ :  ಬೆಂಗಲೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದ 81 ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಮೂರು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಎರಡು ಭದ್ರತಾ ವಾಹನದ ಸರ್ಪಗಾವಲಿನ ಜೊತೆ ಆರೋಪಿಗಳನ್ನ ಇಂದು ಬೆಳ್ಳಂಬೆಳಗ್ಗೆ   ಬಳ್ಳಾರಿಗೆ ಕರೆತರಲಾಯಿತು.

206 ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕೊಡಲಾಗಿತ್ತು. ಇದೀಗ ಅದರಲ್ಲಿ 81 ಆರೋಪಿಗಳನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. 81 ಆರೋಪಿಗಳ ಕೊರೋನಾ ವರದಿ ನೆಗೆಟಿವ್ ಬಂದಿದೆ. ಇಂದು ಮತ್ತೊಂದು ಸುತ್ತಿನ ಆರೋಗ್ಯ ತಪಾಸಣೆ ನಡೆಸುವ ಸಾಧ್ಯತೆ ಇದೆ.

ಆರೋಪಿಗಳನ್ನು ಬ್ಯಾರಕ್ ನಂಬರ್ 9 ರಲ್ಲಿ ಹಾಕಲಾಗಿದ್ದು. ಒಟ್ಟು ಇಪ್ಪತ್ತು ಕೋಣೆಗಳನ್ನು ಮೀಸಲಿಡಲಾಗಿದೆ. ಪ್ರತಿ ಕೋಣೆಯಲ್ಲಿ ತಲಾ ನಾಲ್ವರು ಆರೋಪಿಗಳನ್ನು ಇಟ್ಟಿದ್ದಾರೆ. ಜೊತೆಗೆ ಕಾರಾಗೃಹದ ಸುತ್ತ ಹೆಚ್ಚಿನ ಭದ್ರತೆ ಸಹ ಮಾಡಲಾಗಿದೆ.

-ಅರುಣ್ ನವಲಿ, ಬಳ್ಳಾರಿ

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments