ಬೆಂಗಳೂರು : ವರುಣನ ಆರ್ಭಟಕ್ಕೆ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಮಂದಿಯಂತೂ ತತ್ತರಿಸಿ ಬಿಟ್ಟಿದ್ದಾರೆ. ಲಕ್ಷಾಂತರ ಜನ ಮನೆ ಕಳ್ಕೊಂಡು ಬೀದಿಗೆ ಬಂದಿದ್ದಾರೆ. ಸಂತ್ರಸ್ತರ ನೆರವಿಗೆ ರಾಜ್ಯದ ನಾನಾ ಕಡೆಯಿಂದ ಜನ ಧಾವಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಸಂತ್ರಸ್ತರ ನೆರವಿಗೆ ಕೈ ಜೋಡಿಸಲು ಮುಂದಾಗಿದ್ದಾರೆ.
ಸದಾ ಜನರ ಕಷ್ಟಕ್ಕೆ ಸ್ಪಂದಿಸುವ ಇನ್ಫೋಸಿಸ್ನ ಡಾ. ಸುಧಾಮೂರ್ತಿಯವರು ಕೂಡ ಪ್ರವಾಹ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪರವರು, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಅವರು 10 ಕೋಟಿ ದೇಣಿಗೆ ನೀಡಿದ್ದಾರೆ ಅಂತ ತಿಳಿಸಿದ್ದಾರೆ.
ಸಿಎಂ ಪರಿಹಾರ ನಿಧಿಗೆ 10 ಕೋಟಿ ರೂ ದೇಣಿಗೆ ನೀಡಿದ ಸುಧಾಮೂರ್ತಿ..!
TRENDING ARTICLES

