Monday, September 15, 2025
HomeUncategorizedಪಂಚಭೂತಗಳಲ್ಲಿ ಲೀನರಾದ ಅರುಣ್ ಜೇಟ್ಲಿ

ಪಂಚಭೂತಗಳಲ್ಲಿ ಲೀನರಾದ ಅರುಣ್ ಜೇಟ್ಲಿ

ನವದೆಹಲಿ: ದೇಶ ಕಂಡ ಅಪ್ರತಿಮ ರಾಜಕಾರಣಿ, ಕೇಂದ್ರ ಮಾಜಿ ಸಚಿವ ಅರುಣ್​ ಜೇಟ್ಲಿಯವರು ಇನ್ನು ನೆನಪು ಮಾತ್ರ. ತೀವ್ರ ಅಸೌಖ್ಯದಿಂದ ನಿನ್ನೆ ದೆಹಲಿಯ ಏಮ್ಸ್​​​ ಆಸ್ಪತ್ರೆಯಲ್ಲಿ ನಿಧನರಾದ ಅವರು ಇಂದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ಯಮುನಾ ತಟದ ನಿಗಮ್‌ಬೋಧ್‌ ಘಾಟ್‌ನಲ್ಲಿ ಅರುಣ್​ ಜೇಟ್ಲಿಯವರ ಅಂತ್ಯಕ್ರಿಯೆ ನೆರವೇರಿತು.

ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜೇಟ್ಲಿಯವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ನಿಗಮ್‌ಬೋಧ್‌ ಘಾಟ್‌ವರೆಗೆ ಮೆರವಣಿಗೆಯಲ್ಲಿ ತರಲಾಯಿತು. ಅಲ್ಲಿ ಅಂತಿಮ ವಿಧಿ ವಿಧಾನದ ನಂತರ ಅರುಣ್​​ ಜೇಟ್ಲಿಯವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಸಚಿವೆ ಸೃತಿ ಇರಾನಿ, ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments