Tuesday, September 16, 2025
HomeUncategorizedಡಿಕೆಶಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್ - ಅರೆಸ್ಟ್ ಆಗ್ತಾರಾ ಟ್ರಬಲ್ ಶೂಟರ್​?

ಡಿಕೆಶಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಅರೆಸ್ಟ್ ಆಗ್ತಾರಾ ಟ್ರಬಲ್ ಶೂಟರ್​?

ಬೆಂಗಳೂರು : ನವದೆಹಲಿಯ ತಮ್ಮ ನಿವಾಸದ ಮೇಲೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ರದ್ದು ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಇಡಿ ವಿಚಾರಣೆಗೆ ಗ್ರೀನ್ ಸಿಗ್ನಲ್​ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಹಾಗೂ ಅವರ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ಅನ್ನು ರದ್ದು ಪಡಿಸ್ಬೇಕು ಅಂತ ಹೈಕೋರ್ಟ್ ಮೊರೆ ಹೋಗಿದ್ರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ಇಂದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
2017ರ ಆಗಸ್ಟ್​ 2ನೇ ತಾರೀಖು ಆದಾಯ ತೆರಿಗೆ ಇಲಾಖೆಯವರು ಡಿಕೆಶಿ ಆಪ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು. 8.59 ಕೋಟಿ ರೂಪಾಯಿನ್ನು ಪತ್ತೆಯಾಗಿತ್ತು. ವಿಚಾರಣೆ ವೇಳೆ ಡಿಕೆಶಿ ಸುಳ್ಳು ಮಾಹಿತಿ ನೀಡಿದ್ದಾರೆ ಅಂತ ಆರೋಪಿಸಿ ಐಟಿ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು.
ಡಿಕೆಶಿ ಹವಾಲಾ ಮುಖೇನ ಏಜೆಂಟ್​ ಗಳ ಸಹಾಯದಿಂದ ಸಾವಿರಾರು ಕೋಟಿಯನ್ನು ಬದಲಿಸಿದ್ದರು. ಬ್ಲಾಕ್ ಮನಿಯನ್ನು ವೈಟ್ ಮನಿಯನ್ನಾಗಿ ಪರಿವರ್ತಿಸಿದ್ದಾರೆ ಅನ್ನೋ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ವಿದೇಶದಲ್ಲೂ ಡಿಕೆಶಿ ಹಣ ಹೂಡಿಕೆ ಮಾಡಿದ್ದಾರೆ ಅನ್ನೋ ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​​ ಜಾರಿ ಮಾಡಿತ್ತು. ಇದನ್ನು ವಜಾ ಮಾಡುವಂತೆ ಡಿಕೆಶಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್ ಅರ್ಜಿ ವಜಾಗೊಳಿಸಿದೆ.
ಮಾಜಿ ವಿತ್ತ ಸಚಿವ ಪಿ.ಚಿದಂಬರಂ ‘ಇಡಿ’ತಕ್ಕೆ ಸಿಲುಕಿ ಇತ್ತೀಚಗಷ್ಟೇ ಬಂಧನಕ್ಕೊಳಗಾಗಿರುವುದನ್ನು ಈ ವೇಳೆ ಸ್ಮರಿಸಬಹುದು. ಸದ್ಯ ಇಡಿ ಹಿಡಿತಕ್ಕೆ ಸಿಲುಕಿರುವ ಡಿಕೆಶಿ ಕೂಡ ಅರೆಸ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments