Thursday, August 21, 2025
Google search engine
HomeUncategorizedಸರ್ಕಾರಿ ನೌಕರರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಸಮಿತಿ ರಚನೆ : ಸಿಎಂ ಬೊಮ್ಮಾಯಿ

ಸರ್ಕಾರಿ ನೌಕರರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಸಮಿತಿ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು : ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಘೋಷಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಆದರೆ, ನೌಕರರು ಪ್ರತಿಭಟನೆ ಮುಂದುವರಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ, ಸೌಹಾರ್ದಯುತವಾಗಿ ಸರ್ಕಾರಿ ನೌಕರರ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಂತರ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ನಮ್ಮ ಹಿರಿಯ ಅಧಿಕಾರಿಗಳ ಜೊತೆ ಹಾಗೂ ನೌಕರರ ಸಂಘದವರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ಅವರು ಹಲವಾರು ವಿಷಯ ಪ್ರಸ್ತಾಪ ಮಾಡಿದ್ದಾರೆ. ಸಾಕಷ್ಟು ವಿಷಯ ಚರ್ಚೆಯಾಗಿದೆ. ಅವರು ಯಾವುದಾದರೂ ಒಂದು ತೀರ್ಮಾನಕ್ಕೆ ಬಂದ‌ ಮೇಲೆ ನಮ್ಮ ಹಣಕಾಸಿನ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ನೌಕರ ಪದಾಧಿಕಾರಿಗಳ ನಿರ್ಣಯ ಏನು?
ನಮ್ಮ ಮಾತುಕತೆಯ ಆಧಾರದ ಮೇಲೆ ಸೌಹಾರ್ದಯುತವಾಗಿ ಮುಕ್ತಾಯವಾಗುವ ವಿಶ್ಬಾಸ ಇದೆ. ಅವರು ಪದಾಧಿಕಾರಿಗಳ ಜೊತೆ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ. ಅವರ ನಿರ್ಣಯದ ಆಧಾರದ ಮೇಲೆ ನಾವು ನಿರ್ಣಯ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಸಮಿತಿ
ಹಳೇ ಪಿಂಚಣಿ ವ್ಯವಸ್ಥೆ ಒಪಿಎಸ್ ಜಾರಿಗೆ ಸರ್ಕಾರಿ ನೌಕರರು ಹಲವು ದಿನಗಳಿಂದ ನಡೆಸುತ್ತಿದ್ದ ಮುಷ್ಕರಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ವೇತನ ಹೆಚ್ಚಳ ಭರವಸೆ ಬೆನ್ನಲಲ್ಲೇ ಎನ್​ಪಿಎಸ್ ರದ್ದು ಕುರಿತು ನಿರ್ಧರಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

24 ಗಂಟೆಯಲ್ಲಿ ಡಿಎ ಹೆಚ್ಚಳ ಮಾಡಿದ್ದೇವೆ
ವೇತನ ಆಯೋಗಕ್ಕೆ ಆದಷ್ಟು ಬೇಗ ಮಧ್ಯಂತರ ವರದಿ ನೀಡುವಂತೆ ಕೇಳಿದ್ದೇವೆ. ಆದಷ್ಟು ಬೇಗ ವರದಿ ಬರುವ ವಿಶ್ವಾಸ ಇದೆ. ಕೊವಿಡ್ ಸಮಯದಲ್ಲಿ ಸರ್ಕಾರ ಅವರ ಸಂಬಳ ಕಡಿತ ಮಾಡಿಲ್ಲ. ಅಲ್ಲದೇ 24 ಗಂಟೆಯಲ್ಲಿ ಡಿಎ ಹೆಚ್ಚಳ ಮಾಡಿದ್ದೇವೆ. ಅದನ್ನು ಅವರು ಅಪ್ರಿಸಿಯೇಟ್ ಮಾಡಿದ್ದಾರೆ. ಮಾತುಕತೆಯ ಆಧಾರದಲ್ಲಿ ಅವರ ನಿರ್ಣಯದ ಆಧಾರದ ಮೇಲೆ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments