Sunday, August 24, 2025
Google search engine
HomeUncategorizedಮಹಿಳಾ ಮತದಾರರಿಗಾಗಿ ವಿಶೇಷ 'ಪಿಂಕ್ ಬೂತ್' ಸ್ಥಾಪನೆ

ಮಹಿಳಾ ಮತದಾರರಿಗಾಗಿ ವಿಶೇಷ ‘ಪಿಂಕ್ ಬೂತ್’ ಸ್ಥಾಪನೆ

ಬೆಂಗಳೂರು : ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪಿಂಕ್ ಬೂತ್‌ಗಳು ಸೇರಿದಂತೆ ವಿವಿಧ ಥೀಮ್ ಆಧಾರಿತ ಬೂತ್ ಗಳನ್ನು ಸ್ಥಾಪಿಸಲು ಬಿಬಿಎಂಪಿ ಮುಂದಾಗಿದೆ.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನಸಭಾ ಚುನಾವಣಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪಧಾದಿಕಾರಿಗಳ ಜೊತೆ ವರ್ಚುವಲ್ ಮೂಲಕ ಸಭೆಯನ್ನು ನಡೆಸಿದ್ದಾರೆ.

ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅದರಂತೆ ಮತಗಟ್ಟೆಗಳ ಬಳಿ ಪಾರ್ಕಿಂಗ್ ವ್ಯವಸ್ಥೆ, ವಿಕಲಚೇತನರಿಗಾಗಿ ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ವಿದ್ಯತ್ ವ್ಯವಸ್ಥೆ, ಸರತಿ ಸಾಲಿನ ವ್ಯವಸ್ಥೆ, ಮತ ಚಲಾಯಿಸಲು ಬರುವವರಿಗೆ ಬಿಸಿಲು ಬೀಳದಂತೆ ಪೆಂಡಾಲ್ ವ್ಯವಸ್ಥೆ, ವಿಶೇಷವಾಗಿ ಮಹಿಳೆಯರಿಗಾಗಿ ಪಿಂಕ್ ಬೂತ್‌ಗಳು ಸೇರಿದಂತೆ ವಿವಿಧ ಥೀಮ್ ಆಧಾರಿತ ಬೂತ್ ಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ತಮ್ಮ ಮಟ್ಟದಲ್ಲಿ ಬರುವ ನಿವಾಸಿಗಳಿಗಳೆಲ್ಲರಿಗೂ ಮತದಾನ ಮಾಡುವಂತೆ ಪ್ರೇರೇಪಿಸಬೇಕು. 80 ವರ್ಷ ಮೇಲ್ಪಟ್ಟ ಮತದಾರರಿಗೆ ಮತ್ತು ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಮುಂಚಿತವಾಗಿ ಮನೆಗಳಿಗೆ ಮತದಾನದ ಚೀಟಿ

ಎಲ್ಲರೂ ಮತದಾನ ಮಾಡುವ ಸಲುವಾಗಿ ಚುನಾವಣಾ ಆಯೋಗದ ವತಿಯಿಂದ ಆನೇಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವ ಮುಂಚಿತವಾಗಿ ಎಲ್ಲಾ ಮನೆಗಳಿಗೂ ಮತದಾನದ ಚೀಟಿಗಳನ್ನು ನೀಡಲಾಗುವುದು. ಅಲ್ಲದೆ ವಿ.ಹೆಚ್.ಎ ತಂತ್ರಾಂಶದ ಮೂಲಕ ಮತದಾರರ ಗುರುತಿನ ಚೀಟಿ ನಮೂದಿಸಿ ಮತಗಟ್ಟೆಯ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಶೇ. 55.04 ಮತದಾನ

2018ರ ವಿಧಾನಸಭಾ ಚುನಾವಣೆಯಲ್ಲಿ ಪಾಲಿಕೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಆಗಿರುತ್ತದೆ. ಈ ಬಾರಿ ಮತದಾರರ ಶೇಕಡಾವಾರು ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಿದೆ. ಈ ಸಂಬಂಧ ಮತದಾನದ ಮೌಲ್ಯದ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು. ಮೊದಲ ಬಾರಿಗೆ ಮತದಾನ ಮಾಡುವವರನ್ನು ಹೆಚ್ಚು ಪ್ರೋತ್ಸಾಹಿಸುವುದು ಎಂದು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್ ಹಾಗೂ ಇನ್ನಿತರೆ ಅಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments