ಲಕ್ಕದೊಡ್ಡಿ ಗ್ರಾಮದಲ್ಲಿ ಸಮೃದ್ಧಿ ಮಂಜುನಾಥ್​ಗೆ ಭರ್ಜರಿ ಸ್ವಾಗತ

ಮುಳಬಾಗಿಲು : ಚುನಾವಣಾ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ಭರ್ಜರಿ ಮತ ಪ್ರಚಾರ ಆರಂಭಿಸಿರುವ ಸಮೃದ್ಧಿ ಮಂಜುನಾಥ್ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೌದು, ಇವರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಭರದಿಂದ ಸಾಗಿದೆ.

ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡಿದು ಜಯಶಾಲಿಯಾಗಲು ಬೈರಕೂರು ಪಂಚಾಯಿತಿ ವ್ಯಾಪ್ತಿಯ ಲಕ್ಕದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಶ್ರೀ ಕಾಡೇನಹಳ್ಳಿ ನಾಗರಾಜಣ್ಣನವರ ಅಧ್ಯಕ್ಷತೆಯಲ್ಲಿ “ನಮ್ಮ ನಡೆ ನಿಮ್ಮ ಮನೆಯ ಕಡೆ” ಪ್ರಚಾರ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ರವರು ಈ ಬಾರಿ ತಮ್ಮ ಆಶೀರ್ವಾದ ನೀಡಿ ಬೆಂಬಲಿಸಲು ಪ್ರಾರ್ಥಿಸಿದರು..

ಈ ಸಂದರ್ಭದಲ್ಲಿ ತಾಲ್ಲೂಕು ಮುಖಂಡರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES