Monday, August 25, 2025
Google search engine
HomeUncategorizedKCET 2023 : ಸಿಇಟಿ ಅರ್ಜಿಯಲ್ಲಿ ಮಾಹಿತಿ ತಿದ್ದುಪಡಿಗೆ 15ರವರೆಗೆ ಅವಕಾಶ

KCET 2023 : ಸಿಇಟಿ ಅರ್ಜಿಯಲ್ಲಿ ಮಾಹಿತಿ ತಿದ್ದುಪಡಿಗೆ 15ರವರೆಗೆ ಅವಕಾಶ

ಬೆಂಗಳೂರು : ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್​ ನ್ಯೂಸ್​ ಕೊಟ್ಟಿದೆ. ಈ ವರ್ಷ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್‌ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ.

ಏನೆಲ್ಲಾ ಮಾಹಿತಿ ತಿದ್ದುಪಡಿಗೆ ಅವಕಾಶ 

ವಿದ್ಯಾರ್ಥಿಗಳು ತಮ್ಮ ಪ್ರವರ್ಗ ಮೀಸಲಾತಿ, ವಾರ್ಷಿಕ ಆದಾಯ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ, ವಿಶೇಷ ಕ್ಯಾಟಗರಿ ಇತ್ಯಾದಿಗಳನ್ನು ಸರಿಯಾಗಿ ತುಂಬಲು ಇದರಿಂದ ಅವಕಾಶ ನೀಡಲಾಗಿದೆ.

ಮಾಹಿತಿ ತಿದ್ದಪಡಿ ಹೇಗೆ.. ? 

ವಿದ್ಯಾರ್ಥಿಗಳು ತಮ್ಮ ಪ್ರವರ್ಗ ಮೀಸಲಾತಿ, ವಾರ್ಷಿಕ ಆದಾಯ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ, ವಿಶೇಷ ಕ್ಯಾಟಗರಿ ಇತ್ಯಾದಿಗಳನ್ನು ಸರಿಯಾಗಿ ತುಂಬಲು ಇದರಿಂದ ಅವಕಾಶ ನೀಡಲಾಗಿದೆ. ತಿದ್ದುಪಡಿ ಮಾಡಿದ ಬಳಿಕ, ‘ಡಿಕ್ಲರೇಷನ್‌ ಬಟನ್‌’ ಆಯ್ಕೆ ಮಾಡಿಕೊಂಡು, ನಂತರವಷ್ಟೇ ‘ಫೈನಲ್‌ ಸಬ್‌ಮಿಶನ್‌’ ಸಲ್ಲಿಸಿ, ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ತಿದ್ದುಪಡಿ ಮಾಡಿದ ಅರ್ಜಿಯ ಮುದ್ರಿತ ಪ್ರತಿಯನ್ನು ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಇಟ್ಟಕೊಳ್ಳಬೇಕು. ಇಲ್ಲದೆ ಹೋದರೆ, ಮೊದಲು ಸಲ್ಲಿಸಿದ್ದ ಅರ್ಜಿಯನ್ನೇ ಮುಂದಿನ ಹಂತಗಳಿಗೆ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.

ಯಾವೆಲ್ಲಾ ಮಾಹಿತಿ ತಿದ್ದುಪಡಿಗೆ ಅವಕಾಶವಿರುವುದಿಲ್ಲ 

ಇದರಲ್ಲಿ ಅಭ್ಯರ್ಥಿಯ ಹೆಸರು, ತಂದೆ-ತಾಯಿಯ ಹೆಸರು, ಜನ್ಮ ದಿನಾಂಕ ಇತ್ಯಾದಿಗಳ ಬದಲಾವಣೆಗೆ ಅವಕಾಶ ಇರುವುದಿಲ್ಲ. ಇದರಲ್ಲೇನಾದರೂ ಬದಲಾವಣೆಗಳಿದ್ದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಲಿಯನ್ನು ಸಂಪರ್ಕಿಸಬೇಕು. ಆದರೆ ಸಿಬಿಎಸ್‌ಇ/ಸಿಐಎಸ್‌ಸಿಇ ಪಠ್ಯಕ್ರಮಗಳಲ್ಲಿ 10ನೇ ತರಗತಿ ಓದಿರುವವರು ಈ ವಿವರಗಳನ್ನು ತಮ್ಮ ಅರ್ಜಿಯಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಜೊತೆಗೆ, ರಾಷ್ಟ್ರೀಯತೆಯನ್ನು ತಿದ್ದುಪಡಿ ಮಾಡಿಕೊಳ್ಳಲು ಬಯಸುವ ಓಸಿಐ ಅಭ್ಯರ್ಥಿಗಳು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಹೆಸರಿನಲ್ಲಿ ನಿಗದಿತ ಮೊತ್ತದ ಡಿಮ್ಯಾಂಡ್‌ ಡ್ರಾಫ್ಟ್‌ ಪಡೆದುಕೊಂಡು, ಏಪ್ರಿಲ್‌ 13 ಮತ್ತು 15ರಂದು ನೇರವಾಗಿ ಹಾಜರಾಗಬೇಕುಬಹುದು  ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments