Thursday, August 28, 2025
HomeUncategorizedನಾನು ಗಟ್ಟಿ ಧ್ವನಿಯಲ್ಲಿ ಹೇಳಿರಬಹುದು, 'ಅದು ವೈಯಕ್ತಿಕವಲ್ಲ' : ಬೊಮ್ಮಾಯಿ

ನಾನು ಗಟ್ಟಿ ಧ್ವನಿಯಲ್ಲಿ ಹೇಳಿರಬಹುದು, ‘ಅದು ವೈಯಕ್ತಿಕವಲ್ಲ’ : ಬೊಮ್ಮಾಯಿ

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ನಾವು ಐದು ವರ್ಷಕ್ಕೆ ಬರುವವರು. ನಿವು ಸುದೀರ್ಘ ಅಧಿಕಾರದಲ್ಲಿ ಇರುವವರು. ರಾಜ್ಯದ ಏಳಿಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಅಂತ ನಾನು ಗಟ್ಟಿ ಧ್ವನಿ(ಧನಿ)ಯಲ್ಲಿ ಹೇಳಿರಬಹುದು. ಆದರೆ, ಯಾವುದೇ ವೈಯಕ್ತಿಕ ಅಭಿಪ್ರಾಯ ಇರಲಿಲ್ಲ ಎಂದಿದ್ದಾರೆ.

ನಂಬರ್ ಒನ್ ಸ್ಥಾನದಲ್ಲಿದ್ದೇವೆ

ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ‌. ಜಿಎಸ್ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ‌. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್​ನ 5 ಗ್ಯಾರಂಟಿಗಳಿಗೆ ಕಂಡೀಷನ್ಸ್​​ ಅಪ್ಲೈ : ಜಿ ಪರಮೇಶ್ವರ್​

ಯಶಸ್ವಿಯಾಗಿ ನಿಭಾಯಿಸಿದ್ದೇವೆ

ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ಹೇಳಿದ್ದಾರೆ.

ನಮ್ಮ ಆಡಳಿತದಲ್ಲಿ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments