Sunday, August 24, 2025
Google search engine
HomeUncategorizedಸರ್ಕಾರ ಹೋಗುತ್ತೆ ಅಂತಾ ನಾನು ಹೇಳಿದ್ದೆನಾ? : ಹೆಚ್.ಡಿ ಕುಮಾರಸ್ವಾಮಿ

ಸರ್ಕಾರ ಹೋಗುತ್ತೆ ಅಂತಾ ನಾನು ಹೇಳಿದ್ದೆನಾ? : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ನವೆಂಬರ್ ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ‌. ಸರ್ಕಾರ ಹೋಗುತ್ತೆ ಅಂತಾ ನಾನು ಹೇಳಿದ್ದೆನಾ‌? ಎಂದು ಪ್ರಶ್ನಿಸಿದ್ದಾರೆ.

ಕಳೆದ ಎರಡು ದಿನಗಳ ಮಳೆ ಬೆಂಗಳೂರಿನ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎನ್ನುವುದನ್ನು ನಾನು ಗಮನಿಸಿದ್ದೇನೆ. ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಆಡಳಿತ ನಡೆಸಿವೆ. ಬೆಂಗಳೂರು ಈಗ ಪ್ರತಿ ಮಳೆಗಾಲದಲ್ಲಿಯೂ ಈ ಸಮಸ್ಯೆಗಳು ಆಗುತ್ತಿವೆ. ಇದರ ಬಗ್ಗೆ ರಾಷ್ಟ್ರೀಯ ಪಕ್ಷಗಳಿಗೆ ಚಿಂತೆ ಇದೆಯಾ‌? ಎಂದು ಕಿಡಿಕಾರಿದ್ದಾರೆ.

ನಾಳೆ ಆತ್ಮಾವಲೋಕನ ಸಭೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸಿಕ್ಕಿರುವ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಸಭೆ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವ ಮುಚ್ಚುಮರೆ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಅಂದ್ರೆ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ : ಆರ್ ಅಶೋಕ್

ಯುವಕರಿಗೆ ಹೊಸ ಜವಾಬ್ದಾರಿ

ನಾವು ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ಪಂಚರತ್ನ ರಥಯಾತ್ರೆಗೂ ದೊಡ್ಡ ಸಂಖ್ಯೆಯಲ್ಲಿ ಜನರು  ಸೇರಿದ್ದರು. ಆದರೆ, ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ. ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments