Sunday, August 24, 2025
Google search engine
HomeUncategorizedಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ : ಹೆಚ್.ಡಿ ಕುಮಾರಸ್ವಾಮಿ

ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ. ನಾವು ಕಾಂಗ್ರೆಸ್ ಜೊತೆ ಭಾಗಿಯಾಗಲು ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಛೇಡಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಲ್ಲರೂ ಸರ್ಕಸ್ ಮಾಡುತ್ತಾರೆ. ಎಲ್ಲಿಗೆ ಬರುತ್ತೆ ಎಂದು ನೋಡೋಣ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ.. ಕಾಂಗ್ರೆಸ್‌ ನವರು ಆಕಾಶದ ಮೇಲೆ ಇದ್ದಾರೆ. ನಾವು ಭೂಮಿ ಮೇಲೆ ಇದ್ದೇವೆ. ಅಂತಹವರ ಜೊತೆ ನಾವು ಚರ್ಚೆ ಮಾಡಲು ಆಗುತ್ತಾ? ಜನ ಅವರಿಗೆ ಸಂಪೂರ್ಣ ಆಶೀರ್ವಾದ ಮಾಡಿದ್ದಾರೆ. ಅವರನ್ನು ಮತ್ತೆ ಜನ ಆಕಾಶದಿಂದ ಕೆಳಗೆ ಇಳಿಸಬೇಕು ಅಲ್ವಾ? ಕಾಂಗ್ರೆಸ್ ನವರು ಭೂಮಿಗೆ ಬರುವ ತನಕ ನಾವು ಕಾಯಬೇಕು ತಾನೇ. ನಾವು ಆಕಾಶಕ್ಕೆ ಏರಲು ಆಗುತ್ತಾ? ಭೂಮಿಯಲ್ಲಿ ಇದ್ದೇವೆ. ನೋಡೋಣ.. ಕಾಯೋಣ.. ಎಂದು ಟಕ್ಕರ್ ಕೊಟ್ಟಿದ್ದಾರೆ.

ಅವ್ರೇ ಸತ್ಯಾಂಶವನ್ನು ಬಿಚ್ಚಿಡುತ್ತಿದ್ದಾರೆ

ಉಚಿತ ಗ್ಯಾರಂಟಿ ಬಗ್ಗೆ ಸಚಿವ ಚಲುವ ನಾರಾಯಣಸ್ವಾಮಿ ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಚುನಾವಣೆಗಾಗಿ ಜನರ ಮತ ಪಡೆಯಲು ಅಂತಹ ಸಂಧರ್ಭದಲ್ಲಿ ಚೀಪ್ ಗಿಮಿಕ್ ಸರ್ವೆ ಸಾಮಾನ್ಯ ಎಂದು ಹೇಳಿದ್ದಾರೆ. ಸತ್ಯಾಂಶಗಳು ಒಂದೊಂದೆ ಹೊರಗೆ ಬರುತ್ತಿವೆ. ವೋಟ್ ಪಡೆಯಲು ನಾಡಿನ ಜನತೆಯನ್ನು ಯಾವ ರೀತಿ ದಾರಿ ತಪ್ಪಿಸಿದ್ದೇವೆ ಅಂತಾ ಈ ರೀತಿ ಹೇಳಿಕೆಗಳಿಂದ ಅವರೇ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಇದನ್ನೂ ಓದಿ :

ಈಗ ಬೆಲೆ ಏರಿಕೆಯೂ ನಿಶ್ಚಿತ

ಇಂದು ಬಿಡಬ್ಲ್ಯೂಎಸ್​ಎಸ್​ಬಿ (BWSSB) ನೌಕರರಿಗೆ ಸಂಬಳ ಕೊಡಲು ದುಡ್ಡು ಇಲ್ಲ. ಖಜಾನೆ ಕಾಲಿಯಾಗಿದೆ ಎಂದು ಹೇಳಿದ್ದಾರೆ. ಕರೆಂಟ್ ಬಿಲ್ ಹೆಚ್ಚು ಮಾಡಿದ್ದಾರೆ. ವಾಟರ್ ಬಿಲ್ ಹೆಚ್ಚು ಮಾಡುಬೇಕು ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಒಂದು ಕಡೆ ಗ್ಯಾರಂಟಿ ಎಲ್ಲರಿಗೂ ಉಚಿತ, ಖಚಿತ ಎಂದು ಹೇಳಿದ್ರು. ಈಗ ಬೆಲೆ ಏರಿಕೆಯೂ ನಿಶ್ಚಿತ ಎಂದು ಹೇಳುತ್ತಿದ್ದಾರೆ. ಜನರಿಗೆ ಇನ್ನು ಏನೂ ಕೊಡುಗೆ ಕೊಡುತ್ತಾರೆ ಎಂದು ಸ್ವಲ್ಪ ದಿನ ಕಾದು ನೋಡೋಣ ಎಂದು ಟೀಕಿಸಿದ್ದಾರೆ.

ಏನು ಗುಮ್ಮ ಇದೆ ನೋಡೋಣ

ಕಾಂತರಾಜು ವರದಿ ಸ್ವೀಕಾರ ವಿಚಾರವಾಗಿ ಮಾತನಾಡಿ, ಈಗ ಕಾಂತರಾಜು ವರದಿ ಬರಲಿ ಅದರಲ್ಲಿ ಏನು ಗುಮ್ಮ ಇದೆ ಅಂತಾ ನೋಡೋಣ. ಯಾವ ರೀತಿ ಬರೆಸಿಕೊಂಡಿದ್ದಾರೆ, ಬರೆಸಿದ್ದಾರೆ. ವಾಸ್ತವಾಂಶ ಏನೂ ಇದೆ ನೋಡೋಣ, ವರದಿ ಮಂಡನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ ನಮ್ಮ ಸ್ವಾಗತ ಇದೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments