Sunday, August 24, 2025
Google search engine
HomeUncategorizedಇಂದು ಹುಬ್ಬಳ್ಳಿ-ಧಾರವಾಡ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ

ಇಂದು ಹುಬ್ಬಳ್ಳಿ-ಧಾರವಾಡ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubli-Dharwad Municipal Corporation) 22ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ.

ಹೌದು, ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರ ಕಸರತ್ತು ನಡೆಸಿವೆ.ಇನ್ನೂ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು, ಪಾಲಿಕೆಯ ಸ್ವಾತಂತ್ರ‍್ಯ ಅಮೃತಮಹೋತ್ಸವ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಸಿಎಂ ಬದಲಾವಣೆ ಹೈಕಮಾಂಡ್​ಗೆ ಬಿಟ್ಟಿದ್ದು : ಸಚಿವ ಹೆಚ್​ಕೆ ಪಾಟೀಲ್

22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ

22ನೇ ಅವಧಿಯ ಹು-ಧಾ ಪಾಲಿಕೆ ಚುನಾವಣೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿದೆ.

82 ಸದಸ್ಯರ ಬಲಾಬಲ ಹೊಂದಿರುವ ಮಹಾನಗರ ಪಾಲಿಕೆ

82 ಸದಸ್ಯರ ಬಲಾಬಲ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 39 ಮಂದಿ ಬಿಜೆಪಿ (BJP) ಸದಸ್ಯರು, 33 ಮಂದಿ ಕಾಂಗ್ರೆಸ್ (Congress) ಸದಸ್ಯರು, AIMIM 3, ಜೆಡಿಎಸ್ 1 ಹಾಗೂ 6 ಪಕ್ಷೇತರ ಸದಸ್ಯರು ಇದ್ದಾರೆ. ಸಂಸದ, ಶಾಸಕರು, ಪರಿಷತ್ ಸದಸ್ಯರು ಸೇರಿ ಒಟ್ಟು ಸದಸ್ಯರ ಬಲ 91 ಇದೆ. ಅಡ್ಡಮತದಾನ ಮಾಡಬಹುದೆಂಬ ಕಾರಣಕ್ಕೆ ಉಭಯ ಪಕ್ಷದ ಅಧ್ಯಕ್ಷರಿಂದ ವಿಪ್ ಜಾರಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments