ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಇದುವರೆಗೂ 13 ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಇಂದು 14ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ ಈ ಮೂಲಕ ತಮ್ಮದೇ ದಾಖಲೆಯನ್ನು ತಾವೇ ಮುರಿದು ದಾಖಲೆ ಬರೆದಿದ್ದಾರೆ.
ಇಂದಿನ ಓದು: ಇಂದಿನ ಬಜೆಟ್ ರಾಜ್ಯದ ಜನತೆಯ ಮೇಲೆ ಗೂಬೆ ಕೂರಿಸುವ ಕೆಲಸ: ಆರ್.ಅಶೋಕ್
3.27 ಲಕ್ಷ ಕೋಟಿ,ರೂ. ಗಾತ್ರದ ಬೃಹತ್ ಬಜೆಟ್ನ್ನು ಸಿದ್ದರಾಮಯ್ಯ ಮಂಡಿಸುತ್ತಿದ್ದು ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ, ತೆರಿಗೆ ಮತ್ತು ಕೊಡುಗೆಗಳನ್ನು ನೀಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.
ಬಜೆಟ್ ಆರಂಭಕ್ಕೂ ಮುನ್ನ ರಾಷ್ಟ್ರಕವಿ ಕುವೆಂಪು ರವರ ಯಾವಕಾಲದ ಶಾಸ್ತ್ರವೇನು ಹೇಳಿದರೇನು ಸಾಲುಗಳನ್ನು ಉಲ್ಲೇಖಿಸಿ ಪ್ರಸ್ತಾವನೆ ಮಾಡಿದ್ದಾರೆ.


