ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿ ರಾಜ್ಯ ಬಜೆಟ್ ಮಂಡಿಸಿದರು. ಬಜೆಟ್ ನಲ್ಲಿ ಜಲಸಂಪನ್ಮೂಲ ಇಲಾಖೆಗೆ 1 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ.
10 ನೀರಾವರಿ ಯೋಜನೆ ಪೂರ್ಣಗೊಳಿಸಲು 940 ಕೋಟಿ ರೂ. ಮೀಸಲಿಡಲಾಗಿದೆ. ಕುಡಿಯುವ ನೀರು ಸಮಸ್ಯೆ ಶಾಶ್ವತ ಪರಿಹಾರಕ್ಕೆ 172 ಯೋಜನೆಗಳನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಲಾಗಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ.
ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಯಾವ ಇಲಾಖೆಗೆ ಎಷ್ಟು ಹಣ?
- ಶಿಕ್ಷಣ ಇಲಾಖೆಗೆ 37,000 ಕೋಟಿ ಅನುದಾನ
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24,000 ಕೋಟಿ
- ಇಂಧನ ಇಲಾಖೆಗೆ 22,000 ಕೋಟಿ
- ನೀರಾವರಿ ಇಲಾಖೆಗೆ 19,000 ಕೋಟಿ
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಗೆ 18,000 ಕೋಟಿ
- ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 16,000 ಕೋಟಿ
- ಕಂದಾಯ ಇಲಾಖೆಗೆ 16,000 ಕೋಟಿ
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 14,000 ಕೋಟಿ
- ಸಮಾಜ ಕಲ್ಯಾಣ ಇಲಾಖೆಗೆ 11,000 ಕೋಟಿ
- ಲೋಕೋಪಯೋಗಿ ಇಲಾಖೆಗೆ 10,000 ಕೋಟಿ
- ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 5,800 ಕೋಟಿ
- ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 3,024 ಕೋಟಿ


