Monday, September 8, 2025
HomeUncategorizedಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ : ಬಸವರಾಜ ಬೊಮ್ಮಾಯಿ

ಎರಡನೇ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ವೀಕ್ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೊದಲನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಎರಡನೇ ಅವಧಿಯ ಸಿಎಂ ಸಿದ್ದರಾಮಯ್ಯಗೂ ಸಾಕಷ್ಟು ವ್ಯತ್ಯಾಸ ಇದೆ. ಈಗಿನ ಸಿಎಂ ಸಿದ್ದರಾಮಯ್ಯ ಗೆ ಆಡಳಿತದ ಮೇಲಿನ ಹಿಡಿತ ತಪ್ಪಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕುಟುಕಿದರು.

ಇದನ್ನೂ ಓದಿ: ಸರ್ಕಾರ ನಡೆಸೋರು ನಾವು, ನಮಗೆ ಯಾವುದು ಸರಿನೊ ಅದನ್ನು ಮಾಡ್ತೀವಿ : ಸಚಿವ ಪರಮೇಶ್ವರ್​

ಈ ಕುರಿತು ಮಾದ್ಯಮವರೊಂದಿಗೆ ಮಾತನಾಡಿದ ಅವರು, ಎರಡೇ ತಿಂಗಳಲ್ಲಿ ಮುಖ್ಯಮಂತ್ರಿ ಗಳು ಸಂಪುಟದ ಸಚಿವರನ್ನು ಕರೆದುಕೊಂಡು ದೆಹಲಿಗೆ ಹೋಗಿ ಸಭೆ ನಡೆಸಿರುವುದು ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅಂತ ಗೊತ್ತಾಗಿದೆ.

ಸಿದ್ದರಾಮಯ್ಯ ಒನ್ ಗೂ,  ಸಿದ್ದರಾಮಯ್ಯ ೨ ಬಹಳಷ್ಟು ವ್ಯತ್ಯಾಸವಾಗಿದೆ. ರಾಜಕೀಯ ಸ್ಥಿತಿಗತಿ ಆಂದಿಗಿಂತ ಈಗ ಬದಲಾಗಿದೆ. ಸಿದ್ದರಾಮಯ್ಯ ಅವರ ಆರೋಗ್ಯ ಚೆನ್ನಾಗಿದೆ. ಅವರು ಚೆನ್ನಾಗಿರಲಿ, ಆದರೆ, ಅವರು ಅಡಳಿತ ನಡೆಸುವಲ್ಲಿ ಮೊದಲಿನಷ್ಟು ಸ್ಟ್ರಾಂಗ್ ಇಲ್ಲ ಎಂದು ಅಭಿಪ್ರಾಯ ಪಟ್ಟರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸರ್ಕಾರದ ಆರಂಭದಲ್ಲಿಯೇ ಇಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಶಾಸಕಾಂಗ ಸಭೆಯಲ್ಲಿಯೂ ಶಾಸಕರು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟಿಲ್ಲ. ಟಾನ್ಸಫರ್ ಮಾಡುವ ದಂಧೆ, ಸ್ವಜನ ಪಕ್ಷಪಾತ. ಅವ್ಯಾಹತವಾಗಿ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲದ ಸಂದರ್ಭದಲ್ಲಿ ಪ್ರವಾಹ, ಬರ ಇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಆಡಳಿತ ವೈಫಲ್ಯತೆ ಕಾಣಿಸುತ್ತಿದೆ.

ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈ ಕಮಾಂಡ್ ದೆಹಲಿಯಿಂದ ನಿಯಂತ್ರಿಸುತ್ತಿದ್ದು,  ಇದು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು,  ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತೆ ಎಂದರು.

ದೆಹಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ,  ಇಡಿ ಸಂಪುಟ ದೆಹಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ  ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದ್ದು, ಕಾಂಗ್ರೆಸ್ ‌ಸರ್ಕಾರವನ್ನು ಆಯ್ಕೆ ಮಾಡಿದ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದು ದೂರಿದರು.

ದಲಿತ ವಿರೋಧಿ ನೀತಿ: ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ್ದು ಸರ್ಕಾರದ ದಲಿತ ವಿರೋಧಿ ನೀತಿ ತೊರಿಸುತ್ತದೆ. ಎಸ್ಸಿಪಿ ಟಿಎಸ್ ಪಿ ಯೋಜನೆಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ. ಅನುದಾನದಲ್ಲಿ ಸುಮಾರು 13 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ದಲಿತರ ಅಭಿವೃದ್ಧಿ ಹೊಡೆತ ಬೀಳಲಿದೆ. ಇದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದರು.

ಇನ್ನು ಮಾಜಿ ಸಚಿವ ಬಸವರಾಜ ರಾಯರೆಡ್ಡಿಯವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ರಾಯರೆಡ್ಡಿಯವರು ಅತ್ಯಂತ ಮೇಧಾವಿಗಳು ಅವರು ಯಾವಾಗ ಯಾರ ಬಗ್ಗೆ ಏನು ಮಾತನಾಡುತ್ತಾರೆ ಎನ್ನುವುದು ತಿಳಿಯುವುದಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments