ಅನುಕಂಪದ ನೇಮಕಾತಿಗೆ ಬಿತ್ತು ಬ್ರೇಕ್ ನೇಮಕಾತಿ ತಡೆಗೆ ಸೂಚನೆ!

ಬೆಂಗಳೂರು: ಜಿಲ್ಲಾ ಪಂಚಾಯಿತಿಗಳಲ್ಲಿ ಅನುಕಂಪದ ಆಧಾರದಲ್ಲಿ ಯಾವುದೇ ನೇಮಕಾತಿಗಳನ್ನು ಮಾಡದಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗು ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಸೂಚಿಸಿದೆ.

ಇದನ್ನೂ ಓದಿ: ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಸ್ಪಂದನಾ ಪಾರ್ಥೀವ ಶರೀರ!

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾವ್ಯದರ್ಶಿ ಅವರು ಎಲ್ಲಾ ಜಿಲ್ಲೆಗಳ ಡಿಸಿ ಹಾಗೂ ಸಿಇಒಗಳಿಗೆ ಪತ್ರ ಬರೆದಿದ್ದು, ಎಲ್ಲಾ ಪ್ರಾದೇಶಿಕ ಆಯುಕ್ತರ ಕಚೇರಿಗಳಿಂದ ಸ್ವೀಕೃತವಾಗುತ್ತಿರುವ ಅನುಕಂಪದ ನೇಮಕಾತಿ ಪ್ರಸ್ತಾವನೆಗಳ ಕುರಿತು ಮುಂದಿನ ನಿರ್ದೇಶನದವರೆಗೆ ಯಾವುದೇ ಕ್ರಮ ಕೈಗೊಳದಂತೆ ಸೂಚಿಸಿದ್ದಾರೆ.

ಜಿ.ಪಂ.ಗಳಲ್ಲಿ ನೇರ ನೇಮಕಾತಿಯಡಿ ಭರ್ತಿಗೆ ಲಭ್ಯವಿರುವ ಹುದ್ದೆಗಳಿಗೆ ಅನು ಕಂಪದ ಆಧಾರದ ನೇಮಕಾತಿಗೆ ಬರುವ ಪ್ರಸ್ತಾವನೆ ಪರಿಗಣಿಸಲು ಈ ಹಿಂದೆ ಅವಕಾಶ ನೀಡಲಾಗಿತ್ತು. ಆದರೆ, ಇತ್ತೀಚಿನ ಬೆಳಗಣಿಗೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿ ಗಳಿಗೆ ಬರುವ ಪ್ರಸ್ತಾವನೆಗಳ ಆಧಾರದಲ್ಲಿ ಜಿಪಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನು ಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES