WI vs IND : ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ : ಯಶಸ್ವಿ ಜೈಸ್ವಾಲ್ ಪದಾರ್ಪಣೆ

ಬೆಂಗಳೂರು : ಟೀಂ ಇಂಡಿಯಾ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೂರನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಗಯಾನಾದ ಪೊವಿಡೆನ್ಸ್ ಸ್ಟೇಡಿಯಂನಲ್ಲಿ ಮೂರನೇ ಟಿ-20 ಪಂದ್ಯ ನಡೆಯಲಿದೆ. ಮೊದಲೆರಡು ಪಂದ್ಯದಲ್ಲಿ ಗೆದ್ದು ಬೀಗಿರುವ ವೆಸ್ಟ್ ಇಂಡೀಸ್ ಇಂದಿನ ಪಂದ್ಯವನ್ನು ಗೆಲ್ಲುವ ಆತ್ಮವಿಶ್ವಾಸದಿಂದ ಕಣಕ್ಕಿಳಿಯುತ್ತಿದೆ.

ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅಂತರಾಷ್ಟ್ರೀಯ ಟಿ-20ಗೆ ಪದಾರ್ಪಣೆ ಮಾಡಿದ್ದಾರೆ. ಕುಲುದೀಪ್ ಯಾದವ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಇಶಾನ್ ಕಿಶನ್ ಹಾಗೂ ರವಿ ಬಿಷ್ಣೋಯ್ ತಂಡದಿಂದ ಹೊರಗುಳಿದಿದ್ದಾರೆ. ಈಗಾಗಲೇ ಎರಡು ಪಂದ್ಯಗಳಲ್ಲಿ ಸೋತಿರುವ ಭಾರತ ಸರಣಿ ಜೀವಂತವಾಗಿರಬೇಕಾದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ.

ಇದನ್ನೂ ಓದಿ : Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ರಿಲೀಸ್​

ಭಾರತ ತಂಡ

ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್

ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್

RELATED ARTICLES

Related Articles

TRENDING ARTICLES