Monday, August 25, 2025
Google search engine
HomeUncategorizedಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು : ಸಿಎಂ ಸಿದ್ದರಾಮಯ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.  ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು.

ಇದನ್ನೂ ಓದಿ: 34 ವರ್ಷಗಳ ಬಳಿಕ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಾಶೀರ್ವಾದ ಕಾಂಗ್ರೆಸ್ ಗೆ ಸಿಕ್ಕಿದೆ:ಸಿಎಂ

ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ.

NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments