Saturday, September 13, 2025
HomeUncategorizedಲೋಕಸಭೆ ಚುನಾವಣೆ: 28 ಕ್ಷೇತ್ರಗಳಲ್ಲೂ ಜೆಡಿಎಸ್‌ ಕಣಕ್ಕೆ-ಹೆಚ್​ಡಿಕೆ

ಲೋಕಸಭೆ ಚುನಾವಣೆ: 28 ಕ್ಷೇತ್ರಗಳಲ್ಲೂ ಜೆಡಿಎಸ್‌ ಕಣಕ್ಕೆ-ಹೆಚ್​ಡಿಕೆ

ಹಾಸನ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಎಲ್ಲಾ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಹಾಸನದಲ್ಲಿ ಮಾತನಾಡಿದ ಅವರು, ಎಲ್ಲಾ 28 ಕ್ಷೇತ್ರಗಳಲ್ಲಿ ನಾವು ಗೆದ್ದುಬಿಡ್ತಿವಿ ಅಂತ ನಾನು ಹೇಳಲ್ಲ. ನಾವು ನಾಲ್ಕೈದು ಸ್ಥಾನ ಗೆಲ್ಲುವ ಅವಕಾಶವಿದೆ. ಮುಂದಿನ‌ ದಿನಗಳಲ್ಲೂ ‌ನಮ್ಮ ಪಕ್ಷದ ಕಾರ್ಯಕರ್ತರನ್ನು ನಾನು ಉಳಿಸಬೇಕು. ಕಾರ್ಯಕರ್ತರನ್ನು ಉಳಿಸಿಕೊಳ್ಳಲು, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಾವು ನಮ್ಮ ಪಕ್ಷದ ಕಾರ್ಯಕರ್ತರ ದುಡಿಮೆಗೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾಗಬಾರದು. ಆ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ನಾವಂತೂ ಯಾರ ಹತ್ತಿರವೂ ಮೈತ್ರಿ ಚರ್ಚೆಗೆ ಹೋಗಿಲ್ಲ. ಇದು ಹೊರಗಡೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಯಷ್ಟೇ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿ ವೋಟರ್ ಸೇರಿ ಹಲವಾರು ಸರ್ವೆ ರಿಪೋರ್ಟ್‌ಗಳು ಆಗಲೇ ಬರುತ್ತಿವೆ. ಬಿಜೆಪಿಯವರು 24-25 ಗೆಲ್ಲುತ್ತಾರೆ, ಕಾಂಗ್ರೆಸ್ 5 ಸೀಟು ಗೆಲ್ಲುತ್ತದೆ ಎಂದು ಸಮೀಕ್ಷೆಗಳು ಬರುತ್ತಿವೆ. ಹೀಗಿರುವಾಗ ಬಿಜೆಪಿಯವರಿಗೆ ನಮ್ಮ ಜತೆ ಹೊಂದಾಣಿಕೆ ಅವಶ್ಯಕತೆ ಏನಿದೆ?

ಅವರೇ ಸ್ವತಂತ್ರವಾಗಿ 24-25 ಸೀಟ್ ಗೆಲ್ಲುವುದಾದರೆ ಬಿಜೆಪಿಗೆ ನಮ್ಮ ಅವಶ್ಯಕತೆ ಇಲ್ಲವಲ್ಲ. ಇನ್ನು; ಕಾಂಗ್ರೆಸ್‌ ನವರಿಗೆ ನಮ್ಮ ಅವಶ್ಯಕತೆ ಇಲ್ಲವೇ ಇಲ್ಲ ಬಿಡಿ. ಅವರೂ ಇಪ್ಪತ್ತು ಸೀಟು ಗೆಲ್ಲುತ್ತೇವೆ ಎನ್ನುತ್ತಿದ್ದಾರೆ. ಹೀಗಾಗಿ ಯಾರ ಜತೆಯೂ ಮೈತ್ರಿಯ ವಿಚಾರ ನಮ್ಮ ಮುಂದೆ ಇಲ್ಲ ಎಂದರು.

ಎರಡೂ ಪಕ್ಷಗಳು ದೊಡ್ಡದಾಗಿ ಬೆಳೆದಿವೆ. ಆರ್ಥಿವಾಗಿ ಬಲಿಷ್ಠವಾಗಿವೆ. ನಾವು ಕಾರ್ಯಕರ್ತರ ಪಡೆಯೊಂದಿಗೆ ಯಾವ ರೀತಿ ಹೋಗಬೇಕು, ಯಾವ ರೀತಿ ಸಂಘಟನೆ ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ. ಈಗಾಗಲೇ ಪಕ್ಷದ ಹೊಸ ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಶೀಘ್ರವೇ ಜನಪರ ವಿಷಗಳನ್ನು ಇಟ್ಟುಕೊಂಡು ರಾಜ್ಯದ ಪ್ರವಾಸ ಮಾಡುತ್ತೇವೆ ಎಂದರು ಅವರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments