Wednesday, September 17, 2025
HomeUncategorizedನೀರಿನ ಮೇಲೆ ದೊಣಿ ಇರಬೇಕು, ದೋಣಿಯೊಳಗೆ ನೀರು ಬಂದರೆ ಅಪಾಯ : ಕೋಡಿ ಶ್ರೀ ಎಚ್ಚರಿಕೆ

ನೀರಿನ ಮೇಲೆ ದೊಣಿ ಇರಬೇಕು, ದೋಣಿಯೊಳಗೆ ನೀರು ಬಂದರೆ ಅಪಾಯ : ಕೋಡಿ ಶ್ರೀ ಎಚ್ಚರಿಕೆ

ದಾವಣಗೆರೆ : ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಬೆಳವಣಿಗೆ, ಮುಂಬರುವ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀರಿನ ಮೇಲೆ ದೊಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಕಾಂಗ್ರೆಸ್​ ಸರ್ಕಾರ ಏನೇ ಯೋಜನೆ ಜಾರಿಗೊಳಿಸಿದರೂ ತೊಂದರೆಯಿಲ್ಲ. ರಾಜಕಾರಣಿಗಳಾಗಲಿ, ಗುರುಗಳಾಗಲಿ ಯಾರೇ ಆದರೂ ಸಮಾಜದಲ್ಲಿ ಶಾಂತಿ ನಿರ್ಮಿಸುವ ಹೇಳಿಕೆ ನೀಡಬೇಕು. ಆಳುವ ಸರ್ಕಾರಗಳು ಏನೇ ಯೋಜನೆಗಳನ್ನು ಜಾರಿಗೆ ತಂದರೂ ತೊಂದರೆ ಇಲ್ಲ. ಕಾರಣ ನಮ್ಮ ಕರ್ನಾಟಕ ಪ್ರಾಕೃತಿಕವಾಗಿ ಎಲ್ಲಾ ರೀತಿಯಲ್ಲಿ ಸಮೃದ್ಧವಾಗಿದ್ದು, ಇದನ್ನು ಸಮರ್ಪಕವಾಗಿ ಬಳಿಸಿಕೊಂಡಾಗ ಯಾವುದೇ ತೊಂದರೆ ಆಗದು ಎಂದು ಅಭಯ ನೀಡಿದ್ದಾರೆ.

ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಅಂತ ಹೇಳಿದ್ದೆ. ಅದರಂತೆ ಆಗಿದೆ. ಮುಂಬರು ಲೋಕಸಭಾ ಚುನಾವಣೆಯಲ್ಲೂ ಪಕ್ಷಾಂತರ ಹೆಚ್ಚಾದರೂ, ದೇಶದ ರಾಜಕಾರಣದಲ್ಲಿ ಯಾವುದೇ ಅತಂತ್ರ ಸ್ಥಿತಿಗಳು ಉಂಟಾಗುವುದಿಲ್ಲ. ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಅಂತ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments