ಬೆಂಗಳೂರು : ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ನಿರತ ರೈತನೊಬ್ಬ ಸರ್ಕಾರದ ನಡೆಯನ್ನು ಖಂಡಿಸಿ ಟವಲ್ನಿಂದ ಮರಕ್ಕೆ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆಕೊಟ್ಟಿದೆ. ಬೆಂಗಳೂರಿನಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 20ಕ್ಕೂ ಹೆಚ್ಚು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದಿದ್ದಾರೆ. ಬಳಿಕ, ರೈತರು ಫ್ರೀಡಂ ಪಾರ್ಕ್ನತ್ತ ತೆರಳಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ವೇಳೆ ರೈತನೋರ್ವ ಆತ್ಮಹತ್ಯೆ ಯತ್ನ ಮಾಡಿದ್ದಾನೆ. ಕೂಡಲೇ ಪೊಲೀಸರು ಆತನನ್ನು ತಡೆದಿದ್ದಾರೆ.

ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಎಎಪಿ ಪಕ್ಷಗಳು ಇಂದಿನ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ನಡೆಯಲಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.



Pinco bet mərcləri yüksək uduş gətirir. Hər oyunda şansını yoxla — pinko kazino. Pinco oyna və həyəcanı hiss et.
Pinco oyun dünyasına xoş gəlmisən.