Saturday, August 23, 2025
Google search engine
HomeUncategorizedಶಾಮನೂರು ಹೇಳಿಕೆಯನ್ನ ನಾನು ಸಂಪೂರ್ಣ ಒಪ್ಪುತ್ತೇನೆ : ಯಡಿಯೂರಪ್ಪ

ಶಾಮನೂರು ಹೇಳಿಕೆಯನ್ನ ನಾನು ಸಂಪೂರ್ಣ ಒಪ್ಪುತ್ತೇನೆ : ಯಡಿಯೂರಪ್ಪ

ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯ ಕಡಗಣನೆ ಮಾಡಲಾಗುತ್ತಿದೆ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಸಹಮತ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು.

ಶಾಮನೂರು ಶಿವಶಂಕರಪ್ಪ ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರು. ವೀರಶೈವ ಸಮುದಾಯದವರು ಬಹಳ ದೊಡ್ಡ ಪ್ರಮಾಣದಲ್ಲಿ ಇದ್ದಾರೆ. ಆದರೆ, ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ. ಇದರ ಬಗ್ಗೆ ಶಾಮನೂರು ಅವರಿಗೆ ಕಳಕಳಿ ಇದೆ ಎಂದು ತಿಳಿಸಿದರು.

ಲಿಂಗಾಯತ ಸಮಾಜ ಜಾಗೃತ ಆಗಬೇಕು

ಎಲ್ಲ ವೀರಶೈವ ಸಮುದಾಯದ ಮುಖಂಡರಲ್ಲಿ ಇದೇ ತಳಮಳ ಇದೆ. ಹೀಗಾಗಿ ಅವರ ಹೇಳಿಕೆಯನ್ನು ನಾನು ಸಂಪೂರ್ಣ ಒಪ್ಪುತ್ತೇನೆ. ಈ ಸಮಯದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಜಾಗೃತ ಆಗಬೇಕು, ಒಂದಾಗಬೇಕು, ಒಟ್ಟಾಗಬೇಕು ಎನ್ನುವ ಕರೆಯನ್ನು ನಾನು ಸಹ ಕೊಡುತ್ತೇನೆ ಎಂದು ಯಡಿಯೂರಪ್ಪ ಅವರು ಶಾಮನೂರು ಪರ ಬ್ಯಾಟಿಂಗ್ ಮಾಡಿದರು.

ಲಿಂಗಾಯತರಿಗೆ ಅನ್ಯಾಯವಾಗಲ್ಲ

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತರು ಮಾತ್ರವಲ್ಲ ಯಾವುದೇ ಜಾತಿ, ಧರ್ಮದವರಿಗೂ ಅನ್ಯಾಯವಾಗುವುದಿಲ್ಲ’ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments