ಹರ ಹರ ಮಹಾದೇವ..! ಕೇದಾರನಾಥ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಇಂದು ಅವರು ಉತ್ತರಾಖಂಡದ ಪ್ರಸಿದ್ಧ ತೀರ್ಥಕ್ಷೇತ್ರ ಕೇದಾರನಾಥಕ್ಕೆ ಭೇಟಿ ನೀಡಿ,  ಕೇದಾರನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಸದ್ಯ ಉತ್ತರ ಭಾರತದ ತೀರ್ಥ ಕ್ಷೇತ್ರಗಳ ಪ್ರವಾಸದಲ್ಲಿರುವ ಅವರು, ಈ ಫೋಟೋಗಳನ್ನು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೈಲಾಸ ಪರ್ವತದ ನಂತರ ಕೇದಾರನಾಥವನ್ನು ಶಿವನ ಎರಡನೇ ವಾಸಸ್ಥಾನವೆಂದು ಕರೆಯಲ್ಪಡುವ ಉತ್ತರಾಖಂಡ ರಾಜ್ಯದ ಶ್ರೀ ಕೇದಾರನಾಥ್ ಸ್ವಾಮಿಯ ದರ್ಶನ, ಆಶೀರ್ವಾದ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.

ನೈಸರ್ಗಿಕವಾಗಿಯೇ ಅಲೌಕಿಕ ದೃಶ್ಯಗಳಿಂದ ಕೂಡಿರುವ ಈ ದೇವಾಲಯ ಪವಾಡಗಳು ಹಾಗೂ ಅನೇಕ ಪೌರಾಣಿಕ ಕಥೆಗಳನ್ನು ಒಳಗೊಂಡಿರುವುದು ವಿಶೇಷ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ಬರೆದುಕೊಂಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್‌ ಅವರೊಂದಿಗೆ ಅವಧೂತ ವಿನಯ್‌ ಗುರೂಜಿ ಹಾಗೂ ಶಾಸಕಿ ನಯನಾ ಮೋಟಮ್ಮ ಕೂಡ ಪ್ರವಾಸದಲ್ಲಿ ಸಾಥ್ ನೀಡಿದ್ದಾರೆ.

RELATED ARTICLES

Related Articles

TRENDING ARTICLES