Wednesday, September 3, 2025
HomeUncategorizedಖ್ಯಾತ ಉದ್ಯಮಿ ಕೆ ಸಿ ರಘು ನಿಧನ!

ಖ್ಯಾತ ಉದ್ಯಮಿ ಕೆ ಸಿ ರಘು ನಿಧನ!

ಬೆಂಗಳೂರು: ಖ್ಯಾತ ಉದ್ಯಮಿ ಕೆ.ಸಿ ರಘು ಶ್ವಾಸಕೋಶ ಕ್ಯಾನ್ಸರ್​ ನಿಂದು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯ ವಿಚಾರದಲ್ಲಿ ಅತ್ಯದ್ಭುತವಾದ ಜ್ಞಾನ ಹೊಂದಿದ್ದ ಇವರು ಇಂದು ಬೆಳಗ್ಗೆ ಶ್ವಾಸಕೋಶದ ಕ್ಯಾನ್ಸರ್​ ನಿಂದ ವಿಧಿವಶರಾಗಿದ್ದಾರೆ. ಕೆ.ಸಿ ರಘು ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾಗೆ ಸಿಎಂ ಸಿದ್ದರಾಮಯ್ಯ ಚಾಲನೆ

ತಮ್ಮ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಕಗಳು ತಿಳಿಸಿದೆ.

ಆಹಾರ ತಜ್ಞರಾಗಿ ಹೆಸರುವಾಸಿಯಾಗಿದ್ದ ಕೆ.ಸಿ ರಘು : 

ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞರು, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದರು.

ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು.

ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆಯಾಗಿದೆ. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ‘ಆಹಾರ ರಾಜಕೀಯ’ಮತ್ತು ‘ತುತ್ತು ತತ್ವ’ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments