ಹಾಸನ : ಜೇನು ನೊಣ ದಾಳಿಯಿಂದ ಚಾಲಕ ನಿಯಂತ್ರಣ ತಪ್ಪಿ, ಡಿವೈಡರ್ಗೆ ಕಾರು ಡಿಕ್ಕಿಯಾಗಿರುವ ಘಟನೆ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಹೋಬಳಿಯ ಮಳಲಿ ಕ್ರಾಸ್ ಬಳಿ ನಡೆದಿದೆ.
ಕಾರು ಪಲ್ಟಿಯಾಗಿ ಭಾರಿ ಅನಾಹುತ ತಪ್ಪಿದೆ. ಕಾರು ಚಾಲಕ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ. ಏಕಾಏಕಿ ಜೇನು ನೋಣ ದಾಳಿ ಮಾಡಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಾಗಿ ಚಾಲಕ ಬಚಾವ್ ಆಗಿದ್ದಾನೆ.
ಅರ್ಧಗಂಟೆಗೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು, ಬಳಿಕ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಬಂದು ಟ್ರಾಫಿಕ್ ನಿಯಂತ್ರಿಸಿದ್ದಾರೆ. ಈ ಸಂಬಂಧ ಶಾಂತಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



I got this web page from my buddy who shared with me concerning this web site and now this time I am visiting this site and reading very informative posts here.
register in directory Rio