Thursday, August 28, 2025
HomeUncategorizedದೊಡ್ಡಬಳ್ಳಾಪುರ ಕಸಾಪ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಣೆ!

ದೊಡ್ಡಬಳ್ಳಾಪುರ ಕಸಾಪ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಆಚರಣೆ!

ದೊಡ್ಡಬಳ್ಳಾಪುರ: ಹೊರರಾಜ್ಯಗಳಿಂದ ಬಂದು ದೊಡ್ಡಬಳ್ಳಾಪುರ ತಾಲ್ಲೂಕಿನ  ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಾ ಕನ್ನಡ ಕಲಿತು ಸುಲಲಿತವಾಗಿ ಮಾತನಾಡುತ್ತಾ, ಓದುವುದನ್ನು ಕಲಿತವರಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸುವ ಮೂಲಕ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿರುವ ಬಿಹಾರ ರಾಜ್ಯದ ಮಣೀಶ್ ಶರ್ಮ ಮತ್ತು ಅನಿಲ್ ಗುಪ್ತ ಅವರನ್ನು ಕನ್ನಡಪರ ಸಂಘಟನೆಗಳ ಮುಖಂಡರು  ಸನ್ಮಾನಿಸಿದರು.

ಇದನ್ನೂ ಓದಿ: 68ನೇ ಕನ್ನಡ ರಾಜ್ಯೋತ್ಸವ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಮುನಿಯಪ್ಪ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ್, ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಸುವರ್ಣ ಸಂಭ್ರಮ ಆಚರಿಸುತ್ತಿರುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ. ಕನ್ನಡಿಗರು ಪ್ರಾದೇಶಿಕ ಹಿನ್ನೆಲೆಯಲ್ಲಿ ಸ್ವಾಭಿಮಾನಗಳಾಗಬೇಕು. ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು.

ಕನ್ನಡ, ಕನ್ನಡಿಗರು ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಕನ್ನಡಿಗರು ಚಿಂತನೆ ನಡೆಸಬೇಕಾಗಿದೆ. ಸೌಹಾರ್ದತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ಎಂದಿಗೂ ಮತೀಯ ಶಕ್ತಿಗಳ ಬೆಳವಣಿಗೆ ಅವಕಾಶ ನೀಡಬಾರದು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಬಗ್ಗೆ ಹರಿಸಲು ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನು ತೋರಿಸುತ್ತಿಲ್ಲ. ಪ್ರಾದೇಶಿಕ ಪಕ್ಷಗಳ ಅಗತ್ಯವನ್ನು ಕರ್ನಾಟಕ ಜನರು ಬಯಸುತ್ತಾ ಬಂದಿದ್ದರೂ ಇನ್ನು ಈಡೇರಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಮಾಜಿ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್, ಗೌರವ ಕಾರ್ಯದರ್ಶಿ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿಗಳಾದ ಚಿಕ್ಜತುಮಕೂರು ಮುನಿರಾಜು, ನಾಗರತ್ನಮ್ಮ, ಗೆಜ್ಜಗದಹಳ್ಳಿ ಮುನಿರಾಜು, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜಶಿರವಾರ, ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪಿ.ಎ.ವೆಂಕಟೇಶ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಮುನಿಪಾಪಣ್ಣ, ಕನ್ನಡಪರ ಸಂಘಟನೆಯ ನಾಗರಾಜ್, ಸೂರ್ಯ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಪತ್ರಕರ್ತ ರಹೀಮ್, ಎಂಎಬಿಎಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments