Monday, September 15, 2025
HomeUncategorizedಮೊಬೈಲ್‌ ರಿಪೇರಿ & ಸೇವೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ!

ಮೊಬೈಲ್‌ ರಿಪೇರಿ & ಸೇವೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ!

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 13 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್‌ 10 ಕೊನೆಯ ದಿನವಾಗಿದೆ.

ಇದನ್ನೂ ಓದಿ: ನ.15 ಕ್ಕೆ ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ 9740982585, 8884554510, 9113880324, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments