ಬೆಂಗಳೂರು: ನವೆಂಬರ್ 15/16ರಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ B.Y ವಿಜಯೇಂದ್ರ ಅವರು ಪದಗ್ರಹಣ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ರಾಷ್ಟ್ರೀಯ ನಾಯಕರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ, ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ‘ಬೂತ್ ಗೆದ್ದರೆ ದೇಶ ಗೆದ್ದೇವೆ’ ಎಂದು ನಡ್ಡಾ ಅವರ ಪರಿಕಲ್ಪನೆಯಾಗಿದೆ. ಹಾಗಾಗಿ ಅತ್ಯಂತ ಕೆಳ ಮಟ್ಟದಲ್ಲಿ ಎಲ್ಲರೂ ಒಗ್ಗೂಡಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಯಡಿಯೂರಪ್ಪ ಹಾಗು ವಿಜಯೇಂದ್ರ ಅವರಿಗೆ ಜೈಕಾರ ಕೂಗಿದ್ದಾರೆ.


