ಬೆಂಗಳೂರು : ರೂರ್ಕೆಲಾ-ಭುವನೇಶ್ವರ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿ ಗಾಜಿಗೆ ಹಾನಿಯಾಗಿದೆ.
ಒಡಿಸ್ಸಾದ ಮೇರಾಮಂಡಲಿ ಮತ್ತು ಬುಧಪಂಕ್ ರೈಲ್ವೆ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ರೈಲಿನ ಎಕ್ಸಿಕ್ಯೂಟೀವ್ ಕೋಚ್ ನ ಕಿಟಕಿ ಗಾಜಿಗೆ ಹಾನಿಯಾಗಿದೆ. ರೈಲಿನ ಭದ್ರತೆಗೆ ನಿಯೋಜಿಸಿದ್ದ ರೈಲ್ವೆ ರಕ್ಷಣಾ ದಳದ ಸಿಬ್ಬಂದಿಯು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ರೈಲ್ವೆ ರಕ್ಷಣಾದಳದ ಸಹಾಯಕ ಆಯುಕ್ತರು ಹೆಚ್ಚುವರಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಕಿಡಿಗೇಡಿಗಳಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ರೈಲು ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



Pinco casino Azərbaycanda populyardır. Slot oyunlarında şansını yoxla pinco oyun. Pinco ilə idman mərcləri təhlükəsizdir.
Pinco kazino təhlükəsiz ödəniş üsullarına malikdir.